Advertisement

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

12:30 AM Dec 31, 2024 | Team Udayavani |

ಹೊಸದಿಲ್ಲಿ: ಭಾರತದಲ್ಲಿ ರೊಹಿಂಗ್ಯಾ ವಲಸಿಗರಿಗೆ ನೆಲೆ ಕಲ್ಪಿಸಿದ್ದಕ್ಕೆ ಸಂಬಂಧಿಸಿದೆಂತೆ ಆಪ್‌ ಸಂಚಾಲಕ ಅರವಿಂದ ಕೇಜ್ರಿವಾಲ್‌ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್‌ ಪುರಿ ನಡುವೆ ವಾಗ್ಯುದ್ಧ ನಡೆದಿದೆ.

Advertisement

ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ್ದ ಕೇಜ್ರಿವಾಲ್‌, “ದೇಶದಲ್ಲಿ ರೊಹಿಂಗ್ಯಾಗಳು ಎಲ್ಲಿದ್ದಾರೆ ಎಂಬುದರ ಬಗ್ಗೆ ಸಚಿವರಾಗಿರುವ ಹರ್‌ದೀಪ್‌ ಸಿಂಗ್‌ ಪುರಿ ಮತ್ತು ಅಮಿತ್‌ ಶಾ ಅವರಿಗೆ ಮಾಹಿತಿ ಇದೆ. ಪುರಿ ಅವರನ್ನು ಬಂಧಿಸಿದರೆ ಮಾಹಿತಿ ಸಿಗಲಿದೆ’ ಎಂದು ಹೇಳಿದ್ದರು.

ಇದಕ್ಕೆ ತಿರುಗೇಟು ನೀಡಿದ ಕೇಂದ್ರ ಸಚಿವ ಹರ್‌ದೀಪ್‌ ಸಿಂಗ್‌ಪುರಿ “ಒಂದು ಸುಳ್ಳನ್ನು ಪದೇ ಪದೇ ಹೇಳಿದರೆ ಅದು ಸತ್ಯವಾಗುವುದಿಲ್ಲ. ಮತದಾರರ ಸಂಖ್ಯೆಯನ್ನು ಹೆಚ್ಚಿಸಲು ಕೇಜ್ರಿವಾಲ್‌ ಅವರೇ ರೊಹಿಂಗ್ಯಾಗಳಿಗೆ ದಿಲ್ಲಿಯಲ್ಲಿ ನೆಲೆ ಕಲ್ಪಿಸಿದ್ದಾರೆ ಎಂದು ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next