ಉಡುಪಿ: ಪ್ರವಾಸಿಗರ ನೆಚ್ಚಿನ ತಾಣವಾದ ಉಡುಪಿ ಜಿಲ್ಲೆಯ ಕೆಮ್ಮಣ್ಣು ತೂಗು ಸೇತುವೆಗೆ ತೋನ್ಸೆ ಗ್ರಾಮ ಪಂಚಾಯತ್ ತಾತ್ಕಾಲಿಕ ನಿರ್ಬಂಧ ಹೇರಿದೆ.
ತೋನ್ಸೆ ಮಂಡಲ ಪಂಚಾಯತ್ ಕಾಲದಲ್ಲಿ ತಿಮ್ಮಣ್ಣಕುದ್ರು ನಾಗರಿಕರ ಸಂಪರ್ಕಕ್ಕಾಗಿ ನಿರ್ಮಿಸಲಾಗಿರುವ ಕೆಮ್ಮಣ್ಣು ತೂಗು ಸೇತುವೆ ಪ್ರವಾಸಿ ತಾಣವಾಗಿ ಬಳಕೆಯಾಗುತ್ತಿದ್ದು, ಈ ತೂಗು ಸೇತುವೆಯು ಸದ್ಯ ಅಪಾಯಕಾರಿ ಸ್ಥಿತಿಯಲ್ಲಿರುವುದರಿಂದ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ತೂಗು ಸೇತುವೆಯ ಕುರಿತು ಸೂಚನೆಗಳನ್ನು ನೀಡಿದ್ದರೂ ಸಹ ಅದನ್ನು ಉಲ್ಲಂಘಿಸುವುದು ಕಂಡು ಬಂದ ಹಿನ್ನೆಲೆಯಲ್ಲಿ ಗ್ರಾ.ಪಂ. ಸಾಮಾನ್ಯ ಸಭೆಯ ನಿರ್ಣಯದಂತೆ ಸೇತುವೆಯ ಪುನರ್ ನಿರ್ಮಾಣ ಆಗುವವರೆಗೆ ಸೇತುವೆ ಮೇಲೆ ಓಡಾಟಕ್ಕೆ ನಿರ್ಬಂಧಿಸಿ, ತಾತ್ಕಾಲಿಕವಾಗಿ ಮುಚ್ಚಲು ಕ್ರಮವಹಿಸಲಾಗಿದೆ ಎಂದು ತೋನ್ಸೆ ಗ್ರಾ. ಪಂ. ಪ್ರಕಟನೆ ತಿಳಿಸಿದೆ.
ಇದನ್ನೂ ಓದಿ: ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡುವ ಯೋಜನೆಯಿಂದ ಯಾವುದೇ ರೋಗಿಗೆ ಪ್ರಯೋಜನವಾಗಿಲ್ಲ: ವರುಣ್ ಗಾಂಧಿ