Advertisement

ಕೆಂಪೇಗೌಡ ಪ್ರಶಸ್ತಿ: ಹೈಕೋರ್ಟ್‌ನಲ್ಲಿ ಅರ್ಜಿ ವಜಾ

11:48 AM Nov 10, 2018 | |

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಬಿಬಿಎಂಪಿ ನೀಡುವ ನಾಗರಿಕ ಪುರಸ್ಕಾರ “ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’ ಹಾಗೂ ಅದರ ಆಯ್ಕೆಗೆ ನಿರ್ದಿಷ್ಟ ಮಾನದಂಡಗಳನ್ನು ರೂಪಿಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿತು.

Advertisement

ಬೆಂಗಳೂರಿನ ಜೆ.ಪಿ.ನಗರ 2ನೇ ಹಂತದ ನಿವಾಸಿ ಕೆ.ಅನಿಲ್‌ ಕುಮಾರ್‌ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ದಿನೇಶ್‌ ಮಹೇಶ್ವರಿ ಅವರ ನೇತೃತ್ವದ ವಿಭಾಗೀಯ ಪೀಠ, ಪ್ರಶಸ್ತಿಗೆ ಮಾನದಂಡ ಹಾಗೂ ಆಯ್ಕೆ ಸಮಿತಿ ರಚನೆ ಬಗ್ಗೆ ಸರ್ಕಾರ, ಬಿಬಿಎಂಪಿಗೆ ಮನವಿ ಸಲ್ಲಿಸುವಂತೆ ಅರ್ಜಿದಾರರಿಗೆ ಹೇಳಿ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ವಿಚಾರಣೆ ವೇಳೆ “ಸಂಬಂಧಪಟ್ಟವರಿಗೆ ಮನವಿ ಸಲ್ಲಿಸುವ ಬದಲು ನೇರವಾಗಿ ನ್ಯಾಯಾಲಯದ ಮೊರೆ ಹೋಗಿದ್ದೀರಿ. ಪ್ರಶಸ್ತಿ ಯಾರಿಗೆ ಕೊಡಬೇಕು, ಯಾರಿಗೆ ಕೊಡಬಾರದು ಎಂದು ಕೋರ್ಟ್‌ ನಿರ್ಧರಿಸಲು ಸಾಧ್ಯವಿಲ್ಲ. ಅದಕ್ಕೆ ಸರ್ಕಾರ ಹಾಗೂ ಬೇರೆ ಸಂಸ್ಥೆಗಳಿವೆ. ಅವು ಆ ಕೆಲಸ ಮಾಡಲಿವೆ. ಯಾವುದೇ ಸಾರ್ವಜನಿಕ ಹಿತಾಸಕ್ತಿ ಕಾಣುತ್ತಿಲ್ಲ ನಮ್ಮ ಆದ್ಯತೆಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು ನ್ಯಾಯಪೀಠ ಸೂಕ್ಷ್ಮವಾಗಿ ಹೇಳಿ ಅರ್ಜಿ ವಜಾಗೊಳಿಸಿತು.

Advertisement

Udayavani is now on Telegram. Click here to join our channel and stay updated with the latest news.

Next