Advertisement

ಸರ್ಕಾರದಿಂದ 17ರಂದು ಕೆಂಪೇಗೌಡ ಜಯಂತಿ

12:36 PM Apr 12, 2017 | |

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಇದೇ ಪ್ರಪ್ರಥಮ ಬಾರಿಗೆ ಏ.17ರಂದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

Advertisement

ಕೆಂಪೇಗೌಡ ಜಯಂತಿ ಅಂಗವಾಗಿ ಪಾಲಿಕೆಯ ಆವರಣದಲ್ಲಿನ ಡಾ.ರಾಜಕುಮಾರ್‌ ಗಾಜಿನ ಮನೆಯಲ್ಲಿ ಮಂಗಳವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಡೈನಾಮಿಕ್‌ ನಗರ ಎಂಬ ಹೆಗ್ಗಳಿಕೆ ಗಳಿಸಿದ್ದು, ಅದಕ್ಕೆ ಕೆಂಪೇಗೌಡರು ಹಾಕಿಕೊಟ್ಟ ಬುನಾದಿಯೇ ಕಾರಣ. ಹೀಗಾಗಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರದ ವತಿಯಿಂದ ಕೆಂಪೇಗೌಡ ದಿನಾಚರಣೆ ಆಚರಿಸಲಾಗುವುದು ಎಂದರು. 

ಕೆಂಪೇಗೌಡರ ಜಯಂತಿ ಆಚರಣೆ ಕುರಿತು ಈಗಾಗಲೇ ಆದಿಚುಂಚನಗಿರಿ ಮಠಾಧೀಶರೊಂದಿಗೆ ಚರ್ಚಿಸಿದ್ದು, ಅವರು ಏ.17ರಂದು ಜಯಂತಿ ಆಚರಿಸುವಂತೆ ಸಲಹೆ ನೀಡಿದ್ದಾರೆ. ಮೊದಲಿಗೆ ರಾಜ್ಯಮಟ್ಟದಲ್ಲಿ ಜಯಂತಿ ಆಚರಿಸಿ ಆನಂತರದ ದಿನಗಳಲ್ಲಿ ಜಿಲ್ಲಾಮಟ್ಟದಲ್ಲೂ ಆಚರಣೆಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. 

ನಗರದ ಬಡವರಿಗೆ ಕಡಿಮೆ ದರದಲ್ಲಿ ಉಪಹಾರ ಹಾಗೂ ಊಟ ಒದಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟಿನ್‌ ಆರಂಭಿಸಲಾಗುತ್ತಿದ್ದು, ಪಾಲಿಕೆಯ 198 ವಾರ್ಡ್‌ಗಳಲ್ಲೂ ಕ್ಯಾಂಟಿನ್‌ ತೆರೆಯಲಾಗುವುದು. ಈ ನಿಟ್ಟಿನಲ್ಲಿ ಸ್ಥಳ ಆಯ್ಕೆ ಕಾರ್ಯ ಪ್ರಗತಿಯಲ್ಲಿದ್ದು, ಇನ್ನು 2 ತಿಂಗಳಲ್ಲಿ ಕ್ಯಾಂಟಿನ್‌ಗಳು ಕಾರ್ಯಾರಂಭ ಮಾಡುವ ವಿಶ್ವಾಸವಿದೆ ಎಂದರು. 

ಬೆಂಗಳೂರು ಅಭಿವೃದ್ಧಿಗೆ ಅಗತ್ಯ ಹಣಕಾಸು ನೆರವು ನೀಡಲು ಸರ್ಕಾರ ಸಿದ್ಧವಿದ್ದರೂ, ಬಿಬಿಎಂಪಿಯಿಂದ ಅದನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿಂದೆ ಪಾಲಿಕೆ ಆಡಳಿತ ನಡೆಸಿದವರು, ಗಾರ್ಡನ್‌ ಸಿಟಿ ಖ್ಯಾತಿಯ ಬೆಂಗಳೂರಿಗೆ “ಗಾಬೇìಜ್‌ ಸಿಟಿ’ ಎಂಬ ಕುಖ್ಯಾತಿ ತಂದಿದ್ದರು. ಆದರೆ, ನಮ್ಮ ಸರ್ಕಾರ ಆಡಳಿತಕ್ಕೆ ಬಂದ ನಂತರ ತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ಅನುದಾನ ನೀಡಿ ಸಮಸ್ಯೆ ಉಂಟಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. 

Advertisement

ನಗರದಲ್ಲಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಈ ಹಿಂದಿನಂತೆ ಕಸದ ತೊಟ್ಟಿಗಳನ್ನು ಇರಿಸುವಂತೆ ಸಲಹೆಗಳು ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಮುಂದಾಗಬೇಕು. ಜತೆಗೆ ಬೆಂಗಳೂರನ್ನು ಸ್ವತ್ಛ ಹಾಗೂ ಸುಂದರವಾಗಿಸಿಕೊಳ್ಳುವುದು ಬಿಬಿಎಂಪಿ, ಸರ್ಕಾರ ಹಾಗೂ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಸಿದ್ದರಾಮಯ್ಯ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next