Advertisement
ಕೆಂಪೇಗೌಡ ಅವರು ಎಲ್ಲಾ ವರ್ಗದ ಜನರ ಒಳಿತಿಗಾಗಿ ಯೋಜನೆಗಳನ್ನು ರೂಪಿಸಿದರು. ಕೆರೆ ಕಟ್ಟೆಗಳನ್ನು ನಿರ್ಮಿಸುವ ಮೂಲಕ ಜನೋಪಯೋಗಿ ಕೆಲಸಕ್ಕೆ ಮುಂದಾದರು. ಕೃಷಿಕರಿಗೂ ಅನುಕೂಲವಾಗುವಂತೆ ಹಲವು ಪ್ರಯೋಜನಗಳನ್ನು ತಲುಪಿಸುವ ಕಾರ್ಯ ನಿರ್ವಹಿಸಿದರು. ಎಲ್ಲ ವರ್ಗ ಸಮಾಜವನ್ನು ಗೌರವಿಸಿ ನ್ಯಾಯ ಕೊಡುವ ಕೆಲಸ ವಾಡುವ ಮೂಲಕ ಜಾತ್ಯತೀತ ಮನೋಬಾವನೆಯನ್ನು ತೋರಿದರು ಎಂದರು.
Related Articles
Advertisement
ಸಮಾಜದ ಜನರು ವ್ಯಾಪಾರ ಉದ್ಯಮದ ಜತೆಗೆ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಬೇಕಿದೆ. ಅದರಲ್ಲೂ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಅಡಚಣೆ ಮಾಡಬಾರದು. ಉನ್ನತ ವ್ಯಾಸಂಗ ಮಾಡಿ ಒಳ್ಳೆಯ ಹುದ್ದೆಗಳಿಗೆ ಏರುವಂತಾಗಬೇಕು. ಕಾಲಕ್ಕೆ ತಕ್ಕಂತೆ ಅಭಿವೃದ್ಧಿಂು ಪರಿವರ್ತನೆಗೆ ಹೊಂದಿಕೊಳ್ಳಬೇಕು ಎಂದು ನರೇಂದ್ರ ಸಲಹೆ ಮಾಡಿದರು. ಜಿಲ್ಲಾ ಕೇಂದ್ರದಲ್ಲಿ ಒಕ್ಕಲಿಗ ಸಮುದಾಯ ಭವನಕ್ಕೆ ಸ್ಥಳೀಯ ಶಾಸಕರು ಹೆಚ್ಚಿನ ಆಸಕ್ತಿ ವಹಿಸಿ ಕಾರ್ಯಗತ ಮಾಡುವಂತೆ ನರೇಂದ್ರ ಮನವಿ ಮಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ರಾಜ್ಯ ಸರ್ಕಾರ ಮಹನೀಯರ ಜಯಂತಿ ಆಚರಣೆ ಕಾರ್ಯಕ್ರಮ ಮೂಲಕ ಅಮೂಲ್ಯ ಕೊಡುಗೆಗಳನ್ನು, ಮೌಲ್ಯಗಳನ್ನು ತಿಳಿಸಿಕೊಡುವ ಉತ್ತಮ ಕೆಲಸ ಮಾಡುತ್ತಿದೆ. ಜಿಲ್ಲಾ ಕೇಂದ್ರದಲ್ಲಿ ಒಕ್ಕಲಿಗ ಸಮುದಾಯ ಭವನಕ್ಕೆ ಅಗತ್ಯವಿರುವ ನೆರವು ಒದಗಿಸಲು ತಾವು ಬದ್ಧರಾಗಿರುವುದಾಗಿ ತಿಳಿಸಿದರು.
ಮೈಸೂರಿನ ಮಹಾರಾಜ ಕಾಲೇಜು ಕನ್ನಡ ವಿಬಾಗದ ಉಪನ್ಯಾಸಕ ಡಾ. ಪಿ.ಕೆ. ಕೆಂಪೇಗೌಡ ನಾಡಪ್ರಭು ಕೆಂಪೇಗೌಡರ ಕುರಿತು ವಿಶೇಷ ಉಪನ್ಯಾಸ ನೀಡಿದರು.ಇದೇವೇಳೆ ಸಮಾಜದ ಅಭಿವೃದ್ಧಿ ಶ್ರಮಿಸಿದ ಚಿಕ್ಕಣ್ಣೇಗೌಡ, ಎಲ್. ಹನುಮಯ್ಯ ಹಾಗೂ ಮಂಚೇಗೌಡರನ್ನು ಸನ್ಮಾನಿಸಲಾಯಿತು. ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಎಂ.ಚಿನ್ನಸ್ವಾಮಿ, ಕಾಡಾ ಅಧ್ಯಕ್ಷ ಎಚ್.ಎಸ್.ನಂಜಪ್ಪ, ನಗರಸಭಾಧ್ಯಕ್ಷ ಆರ್.ಎಂ.ರಾಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುಹೇಲ್ ಅಲಿಖಾನ್, ಎಪಿಎಂಸಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಜಿಪಂ ಸದಸ್ಯರಾದ ಶಶಿಕಲಾ, ಮರಗದಮಣಿ, ಶಿವಮ್ಮ, ಡೀಸಿ ಬಿ.ರಾಮು, ಜಿಪಂ ಸಿಇಒ ಡಾ.ಕೆ.ಹರೀಶ್ ಕುಮಾರ್, ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಡಿ.ನಾಗವೇಣಿ, ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಆಕರ್ಷಕ ಜಾನಪದ ಕಲಾತಂಡಗಳೊಡನೆ ನಡೆದ ಕೆಂಪೇಗೌಡರ ಭಾವಚಿತ್ರ ಮೆರವಣಿಗೆಗೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಆರ್. ನರೇಂದ್ರ ಚಾಲನೆ ನೀಡಿದರು.