Advertisement
ನಗರದ ಮೆಜೆಸ್ಟಿಕ್‌ನಲ್ಲಿರುವ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಶನಿವಾರ ದಿಢೀರ್ ಭೇಟಿ ನೀಡಿ ಸುಮಾರು ಎರಡು ಗಂಟೆಗಳ ಕಾಲ ಪರಿಶೀಲನೆ ನಡೆಸಿದ ಅವರು, ಚಿಕ್ಕ ಲಾಲ್‌ಬಾಗ್ ರಸ್ತೆಯಿಂದ ಟರ್ಮಿನಲ್‌ಗೆ ರಸ್ತೆ ಅಭಿವೃದ್ಧಿ, ಮೆಟ್ರೋ ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪಾದಚಾರಿ ಮಾರ್ಗಕ್ಕೆ ಚಾವಣಿ, ಲಗೇಜು ಕೊಠಡಿಗಳಲ್ಲಿ ಸಿಸಿಟಿವಿ ವ್ಯವಸ್ಥೆ, ಅಗ್ನಿನಂದಕಗಳ ಅಳವಡಿಕೆ ಸೇರಿದಂತೆ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಶೀಘ್ರ ನೀಲನಕ್ಷೆ ಸಿದ್ಧಪಡಿಸುವಂತೆ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.ಬಿಎಂಆರ್‌ಸಿಎಲ್‌ನಿಂದ ನಿಗಮಕ್ಕೆ ಹಸ್ತಾಂತರಗೊಂಡ ಖಾಲಿ ಜಾಗದ ಸುರಕ್ಷತೆಗಾಗಿ ಹೆಚ್ಚಿನ ಭದ್ರತಾ ಸಿಬ್ದಂದಿ ನಿಯೋಜಿಸಬೇಕು. ಸರ್ಕಾರದ ಸಂಬಂಧಪಟ್ಟ ಇಲಾಖೆಯ ಸಮನ್ವಯದೊಂದಿಗೆ ಜನೌಷಧಿ ಕೇಂದ್ರಗಳನ್ನು ಬಸ್ ನಿಲ್ದಾಣದಲ್ಲಿ ಪ್ರಾರಂಭಿಸಬೇಕು. ನಿಲ್ದಾಣಗಳಲ್ಲಿ ಪ್ಲಾಸ್ಟಿಕ್
ನಿಷೇಧದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಬೇಕು.
ಚಾಲಕ/ ನಿರ್ವಾಹಕ ವಿಶ್ರಾಂತಿ ಕೊಠಡಿಗಳಲ್ಲಿ ಬೆಡ್‌ಗಳ ಸಂಖ್ಯೆ ಹೆಚ್ಚಿಸಬೇಕು. ಬಸ್ ನಿಲ್ದಾಣಗಳಲ್ಲಿ ವಾಣಿಜ್ಯ ಮಳಿಗೆಗಳು ಖಾಲಿ ಇರದಂತೆ ಕ್ರಮವಹಿಸಬೇಕು. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳ ಸಂಖ್ಯೆ ಹೆಚ್ಚಿಸಬೇಕು. ಅಂಗವಿಕಲ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತಷ್ಟು ವೀಲ್ ಚೇರ್ ಮತ್ತು ಇಳಿಜಾರು ಮಾರ್ಗ ಕಲ್ಪಿಸಬೇಕು. ಜಿಪಿಎಸ್ ಆಧಾರಿತ ಸೂಚನಾ ಫಲಕಗಳನ್ನು ಅಳವಡಿಸಲು ಯೋಜನೆ ರೂಪಿಸುವಂತೆ ನಿರ್ದೇಶನ ನೀಡಿದರು.