Advertisement

Airport: ಬ್ಯಾಗ್‌ನಲ್ಲಿ ಹೆಬ್ಬಾವು, ಆಮೆ, ಕಾಂಗೂರು ಸೇರಿ 234 ವನ್ಯಜೀವಿ!

10:42 AM Aug 23, 2023 | Team Udayavani |

ಬೆಂಗಳೂರು: ಅಳಿವಿನ ಅಂಚಿನಲ್ಲಿರುವ ಹಾಗೂ ಅಪರೂಪದ ವನ್ಯಜೀವಿಗಳನ್ನು ಲಗೇಜ್‌ ಟ್ರಾಲಿ ಬ್ಯಾಗ್‌ಗಳಲ್ಲಿ ಬಚ್ಚಿಟ್ಟು ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

ಎರಡು ಟ್ರಾಲಿ ಬ್ಯಾಗ್‌ಗಳಲ್ಲಿ ತರಲಾಗಿದ್ದ ಹೆಬ್ಟಾವು ಮರಿ, ಊಸರವಳ್ಳಿ, ಆಮೆಗಳು, ಮರಿ ಕಾಂಗರೂ ಸೇರಿ 234 ವನ್ಯಜೀವಿಗಳನ್ನು ರಕ್ಷಿಸಲಾಗಿದೆ. ಸೋಮವಾರ ರಾತ್ರಿ 10.30ಕ್ಕೆ ಬ್ಯಾಂಕಾಕ್‌ನಿಂದ ಎಫ್.ಡಿ-137 ಸಂಖ್ಯೆ ವಿಮಾನವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿತ್ತು. ಈ ವೇಳೆ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ನಿರ್ಗಮನ ದ್ವಾರದ ಬಳಿ ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ಮಾಡುವಾಗ, ಪ್ರಯಾಣಿಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸಿದ್ದಾನೆ. ಈ ವೇಳೆ ಆತನನ್ನು ವಶಕ್ಕೆ ಪಡೆದು ಆತನ ಬ್ಯಾಗ್‌ಗಳನ್ನು ಪರಿಶೀಲಿಸಿದಾಗ ವನ್ಯಜೀವಿಗಳನ್ನು ಕಳ್ಳ ಸಾಗಣೆ ಮಾಡುತ್ತಿರುವುದು ಕಂಡು ಬಂದಿದೆ. ಬಳಿಕ ಆತನನ್ನು ಬಂಧಿಸಲಾಗಿದೆ.

ಇದೇ ವಿಮಾನದಲ್ಲಿ ವಾರಸುದಾರರು ಇಲ್ಲದ ಮತ್ತೂಂದು ಟ್ರಾಲಿ ಬ್ಯಾಗ್‌ ಪತ್ತೆಯಾಗಿದ್ದು, ಅದರಲ್ಲಿಯೂ ವನ್ಯಜೀವಿಗಳು ಇರುವುದು ಕಂಡು ಬಂದಿದೆ. ಈ ಸಂಬಂಧ ವನ್ಯಜೀವಿಗಳ ಕಳ್ಳ ಸಾಗಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಕಸ್ಟಮ್ಸ್‌ ಅಧಿಕಾರಿಗಳು, ತನಿಖೆ ಮುಂದುವರೆಸಿದ್ದಾರೆ.

48 ಸಾವಿರ ಸಿಗರೇಟ್‌ಗಳು ಪತ್ತೆ: ಮತ್ತೂಂದು ಪ್ರಕರಣದಲ್ಲಿ ಇದೇ ವಿಮಾನದಲ್ಲಿ ಬ್ಯಾಂಕಾಕ್‌ನಿಂದ ಕಸ್ಟಮ್ಸ್‌ ವಿಭಾಗಕಕ್ಕೆ ಬಂದಿದ್ದ 2 ಬಾಕ್ಸ್‌ಗಳನ್ನು ಪರಿಶೀಲಿಸಿದಾಗ 48 ಸಾವಿರ ಸಿಗರೇಟ್‌ಗಳು ಪತ್ತೆಯಾಗಿವೆ. ಅವುಗಳ ಮೌಲ್ಯ8.16 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next