Advertisement

ಕೆಂಪೇಗೌಡ ಒಂದು ವರ್ಗಕ್ಕೆ ಸೀಮಿತರಲ್ಲ

06:50 AM Jun 28, 2020 | Lakshmi GovindaRaj |

ಚಿಕ್ಕಬಳ್ಳಾಪುರ: ನಾಡಪ್ರಭು ಕೆಂಪೇಗೌಡರು ಬೆಂಗಳೂರು ಅಭಿವೃದ್ಧಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕೆರೆ-ಕುಂಟೆ ದೇವಾಲಯಗಳು ಇಂದಿನ ಪೀಳಿಗೆಗೆ ಬಳುವಳಿಯಾಗಿ ನೀಡಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಸಂಘದ  ನಿರ್ದೇಶಕರು ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ರಮೇಶ್‌ ತಿಳಿಸಿದರು.

Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಕೆಂಪೇಗೌಡರ 511ನೇ ಜಯಂತಿಯನ್ನು ನಗರದ ತಾಲೂಕು  ಕಚೇರಿಯಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ರಮೇಶ್‌, ಬೆಂಗಳೂರು ಅಭಿವೃದ್ಧಿಯಾಗಲು ಹಾಗೂ ಬೆಂಗಳೂರಿಗೆ ಮೊದಲು  ಅಡಿಪಾಯ ಹಾಕಿದವರು ಕೆಂಪೇಗೌಡರು.

ಇಂದು ಬೆಂಗಳೂರು ವಿಶ್ವ ಪ್ರಖ್ಯಾತಿ ಆಗಲು ಅವರೇ ಕಾರಣ. ಕೆಂಪೇಗೌಡರು ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಇಂದಿನ ಪೀಳಿಗೆ  ಹಾಗೂ ಮುಂದಿನ ಪೀಳಿಗೆಗೆ ಕೆರೆ-ಕುಂಟೆ ದೇವಾಲಯಗಳನ್ನು ಬಳುವಳಿಯಾಗಿ ನಮಗೆ ನೀಡಿದ್ದಾರೆ ಎಂದು ಹೇಳಿದರು. ಸಾಹಿತಿಗಳಾದ ಗೋಪಾಲಗೌಡರು ಕೆಂಪೇಗೌಡರ  ಜೀವನಚರಿತ್ರೆ ಹಾಗೂ ನಡೆದು ಬಂದ ಹಾದಿ ಬಗ್ಗೆ ತಿಳಿಸಿದರು.

ಈ  ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಬಿ.ಎಂ. ರಾಮಸ್ವಾಮಿ, ತಹಶೀಲ್ದಾರ್‌ ನಾಗಪ್ರಶಾಂತ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೈನಾಶ್ರೀ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next