ದೇವನಹಳ್ಳಿ: ಬೆಂಗಳೂರು ನಿರ್ಮಾಣ ಮಾಡಿದ ಕೆಂಪೇಗೌಡರ ಕೊಡುಗೆ ನಾಡಿಗೆ ಅಪಾರವಾಗಿದೆ. ಕೆಂಪೇಗೌಡರ ದೂರದೃಷ್ಟಿ ಇಂದಿಗೂ ಪ್ರಸ್ತುತವಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಪಂ ವತಿಯಿಂದ ಹಮ್ಮಿಕೊಂಡಿದ್ದ 513ನೇ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೇಟೆಗಳ ಹರಿಕಾರ, ಕೆರೆ-ಕಟ್ಟೆಗಳ ಅಭಿವೃದ್ಧಿ, ಕೋಟೆ-ಕೊತ್ತಲೆ ನಿರ್ಮಾಣ ಮಾಡಿ ಇಡೀ ಸಮಾಜಕ್ಕೆ ಮಾದರಿಯೆನಿಸಿಕೊಂಡಿದ್ದಾರೆ. ಇವರ ಇಡೀ ಜೀವನ ಚರಿತ್ರೆಯ ಪುಟಗಳಲ್ಲಿ ಶಾಶ್ವತವಾಗಿ ಉಳಿದುಕೊಂಡಿದೆ. ಚಿಕ್ಕಬಳ್ಳಾಪುರ ಮತ್ತು ಬೆಂ.ಗ್ರಾ. ಜಿಲ್ಲೆಯಲ್ಲಿ ಉಪಗ್ರಹ ಆಧಾರಿತ ನಗರಗಳನ್ನು ಮಾಡಬೇಕಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದರು.
ಕೆಂಪೇಗೌಡರ ಆದರ್ಶ ಪ್ರತಿಯೊಬ್ಬರೂ ಪಾಲಿಸಿ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ಎನ್.ಕೃಷ್ಣಪ್ಪ ಮಾತನಾಡಿ, ಜಾಗತಿಕವಾಗಿ ಗುರುತಿಸಿಕೊಂಡಿರುವ ಬೆಂಗಳೂರು ನಗರವನ್ನು ಕಟ್ಟಿರುವ ನಾಡಪ್ರಭು ಕೆಂಪೇಗೌಡರ ಜೀವನ, ಆದರ್ಶ ಪ್ರತಿಯೊಬ್ಬರೂ ಪಾಲಿಸಬೇಕಿದೆ. ಕೆಂಪೇಗೌಡರ ಇತಿಹಾಸವನ್ನು ತಮ್ಮ ಮಕ್ಕಳಿಗೆ ತಿಳಿಸಿ ಹೇಳಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಕೆಂಪೇಗೌಡರು ಭದ್ರವಾದ ಕೋಟೆ ಕಟ್ಟುವುದರ ಮೂಲಕ ನಾಡಿನ ಗಡಿ ಪ್ರಜೆಗಳನ್ನು ರಕ್ಷಿಸುವ ಕೆಲಸ ಮಾಡಿದ್ದರು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಕ್ರಮ ಅಳವಡಿಸಿಕೊಂಡಿದ್ದರು ಎಂದು ಹೇಳಿದರು.
Related Articles
ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಮತ್ತು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಕೆ.ಸುಧಾಕರ್ ಅವರ ಹುಟ್ಟುಹಬ್ಬಕ್ಕೆ ಮಕ್ಕಳಿಂದ ಹೂ ನೀಡುವುದರ ಮೂಲಕ ಅಭಿನಂದಿಸಿದರು.
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಮಾದರಿ ರೈತರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಜಿಪಂ ಸಿಇಒ ಕೆ.ರೇವಣಪ್ಪ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ತೇಜಸ್ ಕುಮಾರ್, ತಹಶೀಲ್ದಾರ್ ಶಿವರಾಜ್, ತಾಪಂ ಇಒ ವಸಂತ್‌ಕುಮಾರ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಸಿ.ವೆಂಕಟೇಗೌಡ, ಕಾರ್ಯದರ್ಶಿ ಮುನಿ ರಾಜು, ವಕೀಲ ನಾರಾಯಣ್.ಜೆ.ಪಿ, ನಿರ್ದೇಶಕ ಆರ್.ಕೆ.ನಂಜೇಗೌಡ, ನೆರಗನಹಳ್ಳಿ ಶ್ರೀನಿವಾಸ್, ಕೃಷಿಕ ಸಮಾಜದ ನಿರ್ದೇಶಕ ರವಿಕುಮಾರ್, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ, ಸಮಾಜದ ಮುಖಂಡ ಕೆ.ಸಿ.ಮಂಜುನಾಥ್, ದ್ಯಾವರಹಳ್ಳಿ ವಿ.ಶಾಂತಕುಮಾರ್, ಆರ್.ಮುನೇಗೌಡ, ವಿನೋ ದ್‌ಗೌಡ, ಅಶ್ವತ್ಥ್ಗೌಡ, ಪುರಸಭಾ ಮುಖ್ಯಾಧಿಕಾರಿ ನಾಗರಾಜ್, ಮುನಿರಾಜು(ಅಪ್ಪಯ್ಯ) ಎಪಿಎಂಸಿ ಮಾಜಿ ಉಪಾಧ್ಯಕ್ಷ ಸುಧಾಕರ್, ಎಸ್‌ಎಲ್‌ಎನ್ ಮುನಿರಾಜು, ಹೊಸಳ್ಳಿ ಟಿ.ರವಿ, ಸಾದಹಳ್ಳಿ ಮಹೇಶ್, ರಬ್ಬನಹಳ್ಳಿ ಪ್ರಭಾಕರ್, ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳು ಇದ್ದರು.