Advertisement
2016ರಲ್ಲಿ ಯೋಜನೆ ಘೋಷಿಸಿದ್ದು, ಇಲ್ಲಿಯವರೆಗೂ ಯಾವುದೊಂದು ಅಭಿವೃದ್ಧಿ ಕಾರ್ಯಗಳು ಕೂಡ ನಡೆದಿಲ್ಲ. ಜ್ಞಾನಭಾರತಿ ಆವರಣದಲ್ಲಿ 3 ಎಕರೆ ಜಾಗ ಕೂಡ ನಿಗದಿ ಮಾಡಲಾಗಿದೆ. ಹೀಗಿದ್ದರೂ ಸರ್ಕಾರ ಅನಗತ್ಯವಾಗಿ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ಅಧ್ಯಯನ ಕೇಂದ್ರ ಶಂಕುಸ್ಥಾಪನೆ ವೇಳೆ ಜ್ಞಾನಭಾರತಿ ಆವರಣದಲ್ಲಿ ಆರಂಭವಾದ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೋಜನೆ ಪೂರ್ಣಗೊಂಡಿದೆ. ಆದರೆ, ಕೆಂಪೇಗೌಡ ಅಧ್ಯಯನ ಕೇಂದ್ರ ಮಾತ್ರ ಇನ್ನೂ ಆರಂಭವಾಗಿಲ್ಲ. ಈ ಕುರಿತು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯಿಸಿದರೂ ಕೆಲಸಗಳು ಮಾತ್ರ ಆರಂಭಗೊಂಡಿಲ್ಲ. ಬಿಬಿಎಂಪಿ ಆಯುಕ್ತರಿಗೆ ಸಾಕಷ್ಟು ಬಾರಿ ಗಮನಕ್ಕೆ ತಂದಿದ್ದರೂ ಟೆಂಡರ್ ಕಾರ್ಯ ಪೂರ್ಣಗೊಳಿಸಿ ಅಧ್ಯಯನ ಕೇಂದ್ರ ನಿರ್ಮಿಸುವ ಯಾವುದೇ ಮನಸ್ಸು ಮಾಡಿಲ್ಲ ಎಂದು ಕೆಂಪೇಗೌಡ ಅಭಿವೃದ್ಧಿ ಕೇಂದ್ರದ ಸಮಿತಿ ಸದಸ್ಯ ಮಾಗಡಿ ರಂಗಪ್ಪ ಅಸಮಾಧಾನ ವ್ಯಕ್ತಪಡಿಸುತ್ತಾರೆ.
ಅಧ್ಯಯನ ಕೇಂದ್ರದ ಆಕರ್ಷಣೆಯಾಗಿ ಕೆಂಪೇಗೌಡರ ಕಾಲದ ಶಾಸನಗಳು, ಶಿಲ್ಪಕಲೆ, ಗೋಪುರಗಳು, ದೇವಸ್ಥಾನ, ಕೆರೆ ಕಟ್ಟೆಗಳನ್ನು ನಿರ್ಮಿಸುವ ಮೂಲಕ 16ನೇ ಶತಮಾನದ ನಗರವನ್ನು ಮರುಸೃಷ್ಟಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಸುಮಾರು 15 ಕೋಟಿ ವೆಚ್ಚದಲ್ಲಿ ಹಳೆ ಬೆಂಗಳೂರಿನ ಮರು ಸೃಷ್ಟಿ ಮಾಡುವ ಯೋಜನೆ ನಿರ್ಮಿಸಲಾಗಿದೆ. ಕೆಂಪೇಗೌಡರ ಕಾಲದಲ್ಲಿ ನಗರದಲ್ಲಿ ನಿರ್ಮಿಸಲಾಗಿದ್ದ ಅರಳೇಪೇಟೆ, ಬಳೇಪೇಟೆ, ಕುಂಬಾರಪೇಟೆ, ಗಾಣಿಗರಪೇಟೆ, ಕಬ್ಬನ್ ಪೇಟೆ, ತಿಗಳರ ಪೇಟೆ ಸೇರಿದಂತೆ 22 ಪೇಟೆಗಳ ಮಾದರಿಗಳು ಈ ಬಯಲು ವಸ್ತುಸಂಗ್ರಹಾಲಯದಲ್ಲಿ ನಿರ್ಮಿಸುವ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದೆ. ಇದನ್ನೂ ಓದಿ : ನೈಟ್ ಕರ್ಫ್ಯೂ ಬಗ್ಗೆ ಸದ್ಯದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ
Related Articles
Advertisement
ಸಂಶೋಧನಾ ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಇತಿಹಾಸ, ಆಡಳಿತ ಮತ್ತು ಕೊಡುಗೆಗಳ ಸಂಪೂರ್ಣ ಮಾಹಿತಿ ಸಿಗಬೇಕು ಎಂಬುದು ಅಧ್ಯಯನ ಕೇಂದ್ರದ ಉದ್ದೇಶಗಳಲ್ಲಿ ಒಂದಾಗಿದೆ. ಆದರೆ, ಟೆಂಡರ್ ಪ್ರಕ್ರಿಯೆ ನಿಂತಲ್ಲೇ ನಿಂತಿರುವುದರಿಂದ ಯೋಜನೆ ಜಾರಿಯಾಗದಂತಾಗಿದೆ.
2016ರಲ್ಲಿ ಶಂಕು ಸ್ಥಾಪನೆಜ್ಞಾನಭಾರತಿ ಆವರಣದಲ್ಲಿ ಮೂರು ಎಕರೆ ಪ್ರದೇಶದಲ್ಲಿ ಅಂದಾಜು 50 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಅಧ್ಯಯನ ಕೇಂದ್ರ ನಿರ್ಮಿಸಲು ಉದ್ದೇಶಿಸಲಾಗಿತ್ತು. ಅದರಂತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ 2016ರಲ್ಲಿ ಯೋಜನೆಯನ್ನು ಘೋಷಿಸಿ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಬಿಜೆಪಿ ಸರ್ಕಾರ ಬಂದ ನಂತರ ಮತ್ತೂಮ್ಮೆ 2018ರಲ್ಲಿ ಅಧ್ಯಯನ ಕೇಂದ್ರದ ಉಪಾಧ್ಯಕ್ಷರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಶಂಕುಸ್ಥಾಪನೆ ನೆರವೇರಿಸಿ ಟೆಂಡರ್ ಕರೆಯಲಾಗಿತ್ತು. ತಾಂತ್ರಿಕ ಕಾರಣಗಳಿಂದ ಟೆಂಡರ್ ರದ್ದುಗೊಂಡಿದೆ. ಪರಿಣಾಮ, ಸಂಶೋಧನಾ ಕೇಂದ್ರ ನಿರ್ಮಿಸುವ ಸರ್ಕಾರದ ಯೋಜನೆ ಕೂಡ ಅಲ್ಲಿಗೇ ಸ್ಥಗಿತಗೊಂಡಿದೆ.