Advertisement
9ನೇ ತರಗತಿ ವಿದ್ಯಾರ್ಥಿ ವಿಚಾರಣೆಹನುಮ ಧ್ವಜ ತೆರವು ಹಿನ್ನೆಲೆಯಲ್ಲಿ ಉಂಟಾದ ಘರ್ಷಣೆಗೆ ಸಂಬಂಧಿಸಿ ಕೆರಗೋಡು ಹಾಗೂ ಮಂಡ್ಯ ಪೊಲೀಸ್ ಠಾಣೆಯಲ್ಲಿ 60ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬುಧವಾರ ಬೆಳಗ್ಗೆ ಕೆರಗೋಡು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಮುಂಜಾನೆ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿ ವಾಪಸ್ ಕಳುಹಿಸಿದ್ದಾರೆ. ಈತನ ಮನೆಗೆ ಭೇಟಿ ನೀಡಲು ಬಂದ ಬಿಜೆಪಿ ನಿಯೋಗಕ್ಕೆ ಮನೆಯವರು ಅವಕಾಶ ನೀಡಲಿಲ್ಲ. ನಮಗೆ ಯಾವುದೇ ಧ್ವಜ, ರಾಜಕೀಯ ಬೇಡ ಎಂದು ಹೇಳಿ ವಾಪಸ್ ಕಳುಹಿಸಿದ್ದಾರೆ.
ಕೆರಗೋಡು ಹನುಮ ಧ್ವಜ ತೆರವು ವಿವಾದ ಹಿನ್ನೆಲೆಯಲ್ಲಿ ಉಂಟಾದ ಪ್ರತಿಭಟನೆ ಹಾಗೂ ಪಾದಯಾತ್ರೆಯಲ್ಲಿ ಪೊಲೀಸರ ಲಾಠಿಚಾರ್ಜ್‌ನಿಂದ ಗಾಯಗೊಂಡವರ ಮನೆಗೆ ಬಿಜೆಪಿ ನಿಯೋಗ ಭೇಟಿ ನೀಡಿ ಸಾಂತ್ವನ ಹೇಳಿತು. ಮೈಸೂರಿನ ಅಂಬೇಡ್ಕರ್ ಪಾರ್ಕ್‌ನಲ್ಲಿದ್ದ ಟಿಪ್ಪು ಧ್ವಜ ತೆರವು
ಮೈಸೂರು: ಮಂಡ್ಯದ ಕೆರಗೋಡು ಹನುಮ ಧ್ವಜ ಗಲಾಟೆ ಕಾವು ಆರುವ ಮುನ್ನವೇ ಮೈಸೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಸುರು ಬಾವುಟ ಮತ್ತು ಟಿಪ್ಪು ಬಾವುಟ ಹಾರಿಸುತ್ತಿರುವ ಬಗ್ಗೆ ಸಂಸದ ಪ್ರತಾಪಸಿಂಹ ತಮ್ಮ ಎಕ್ಸ್ ಖಾತೆಯಲ್ಲಿ ಜಿಲ್ಲಾಡಳಿತ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಮಂಗಳವಾರ ರಾತೋರಾತ್ರಿ ಮೈಸೂರಿನ ಕೈಲಾಸಪುರಂನ ಮೊಟ್ಟೆಕೇರಿಯ ಅಂಬೇಡ್ಕರ್ ಪಾರ್ಕ್‌ನಲ್ಲಿ ಟಿಪ್ಪು ಧ್ವಜವನ್ನು ತೆರವು ಮಾಡಿದ್ದಾರೆ. ಇದಾದ ಬಳಿಕ ಮೈಸೂರು ಜಿಲ್ಲಾಡಳಿತಕ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಧನ್ಯವಾದ ತಿಳಿಸಿರುವ ಸಂಸದರು, ಒಂದು ಬಾವುಟ ತೆಗೆದು, ಪಕ್ಕದಲ್ಲೇ ಇನ್ನೊಂದನ್ನು ಯಾಕೆ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ನಾನೇ ಸ್ಥಳಕ್ಕೆ ಬಂದು ತೋರಿಸಬೇಕಾ? ಕೈಲಾಸಪುರಂನ ನಾಲ್ಕನೇ ಮುಖ್ಯರಸ್ತೆ ಅಂಬೇಡ್ಕರ್ ಪಾರ್ಕ್, ಶ್ರೀನಿವಾಸ ದೇವಸ್ಥಾನ ರಸ್ತೆಯಲ್ಲಿ ಮತ್ತೂಂದು ಧ್ವಜ ಕಾಣುತ್ತಿಲ್ಲವೇ ಎಂದು ಫೋಟೊ ಸಮೇತ ಜಿಲ್ಲಾಡಳಿತವನ್ನು ಪ್ರಶ್ನಿಸಿದ್ದಾರೆ.
Related Articles
ಸಿರವಾರ: ರಾಯಚೂರು ನಗರದ ಮುಖ್ಯ ರಸ್ತೆಯಲ್ಲಿರುವ ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಅವಮಾನ ಮಾಡಿದ್ದು, ಘಟನೆಯನ್ನು ಖಂಡಿಸಿ ಬುಧವಾರ ಪಟ್ಟಣದ ಮುಖ್ಯರಸ್ತೆ ತಡೆದು ಪ್ರತಿ ಭಟನೆ ಮಾಡ ಲಾಯಿ ತು. ಕಿಡಿಗೇಡಿ ಗಳು ಮಂಗಳವಾರ ತಡರಾತ್ರಿ ನಾಮಫಲಕಕ್ಕೆ ಅಪಚಾರ ಎಸಗಿದ್ದರು. ಬೆಳ್ಳಂಬೆಳಗ್ಗೆ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾ ಣವಾಗಿತ್ತು. ಮುಸ್ಲಿಂ ಯುವಕರು ಮುಖ್ಯರಸ್ತೆ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ತಹಶೀಲ್ದಾರ್ ರವಿ ಎಸ್. ಅಂಗಡಿ ಭೇಟಿ ಪಟ್ಟಣದ ಎಲ್ಲ ವೃತ್ತಗಳಲ್ಲಿ ಸಿಸಿ ಕೆಮರಾ ಅಳವಡಿಸಲಾಗುವುದು. 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿ ಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
Advertisement
ಫೆ.7ರಂದು ಮಂಡ್ಯ ನಗರ ಬಂದ್ ಮಂಡ್ಯ ಜಿಲ್ಲೆಯ ಸೌಹಾರ್ದ ಮತ್ತು ಶಾಂತಿಯನ್ನು ಕದಡುತ್ತಿರುವ ಶಕ್ತಿಗಳ ವಿರುದ್ಧ ಹೋರಾಟ ನಡೆಸಲು ಫೆ.7ರಂದು ಮಂಡ್ಯ ನಗರ ಬಂದ್ ಕರೆ ನೀಡಲಾಗಿದೆ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ತಿಳಿಸಿದರು. ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಜಿಲ್ಲೆಯ ಸೌಹಾರ್ದ ಪರಂಪರೆಗೆ ಮಸಿ ಬಳಿದು, ಶಾಂತಿ, ನೆಮ್ಮದಿಯನ್ನು ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಬಂದ್ ಮೂಲಕ ಜಿಲ್ಲೆಯನ್ನು ಸೌಹಾರ್ದದ ನೆಲೆಯಾಗಿ ಉಳಿಸಿಕೊಳ್ಳುತ್ತೇವೆ ಎಂಬ ಸಂದೇಶ ಕೊಡಲು ಬಂದ್ ನಡೆಸಲಾಗುತ್ತಿದೆ ಎಂದು ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಸಂಘಟನೆಗಳ ಮುಖಂಡರು ಹೇಳಿದರು.