ಕೇರಳ: ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿರುವ ಕೈಗಾರಿಕಾ ಘಟಕದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ,ಹಲವರಿಗೆ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಮೃತ ವ್ಯಕ್ತಿಯನ್ನು 22 ವರ್ಷದ ಅರವಿಂದನ್ ಎಂದು ಗುರುತಿಸಲಾಗಿದೆ. ಈ ವೇಳೆ ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.
ಉಕ್ಕಿನ ಕಾರ್ಖಾನೆಯಲ್ಲಿ ಯಂತ್ರವನ್ನು ಆಪರೇಟ್ ಮಾಡುತ್ತಿದ್ದಅರವಿಂದನ್. ಪ್ರಾಥಮಿಕ ತನಿಖೆಯ ಪ್ರಕಾರ, ಕುಲುಮೆಯಲ್ಲಿ ಸಂಭವಿಸಿದ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿಬರಬಹುದು ಎಂದು ಪೊಲೀಸರು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೀಗ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ಸ್ಥಾವರದೊಳಗೆ ಸಾಕಷ್ಟು ಮಂದಿಯಿದ್ದು, ಅವರನ್ನು ರಕ್ಷಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ…