Advertisement

Kerala ಸ್ಫೋಟ: ರಾಜ್ಯದಲ್ಲಿ ಕಟ್ಟೆಚ್ಚರ

10:40 PM Oct 29, 2023 | Team Udayavani |

ಬೆಂಗಳೂರು: ಕೇರಳದ ಎರ್ನಾಕುಳಂನ ಕಳಮಶೆರಿಯಲ್ಲಿ ಸರಣಿ ಸ್ಫೋಟ ನಡೆದ ಬೆನ್ನಲ್ಲೇ ಬೆಂಗಳೂರು ಸಹಿತ ರಾಜ್ಯಾದ್ಯಂತ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ.

Advertisement

ಕೇರಳ ಗಡಿ ಕರಾವಳಿ ಭಾಗದಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು ಸೂಚಿಸಿದ್ದಾರೆ. ಮತ್ತೂಂದೆಡೆ ನಗರದಲ್ಲೂ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ನಗರ ಪೊಲೀಸ್‌ ಆಯಕ್ತ ಬಿ. ದಯಾನಂದ ನಿರ್ದೇಶಿಸಿದ್ದಾರೆ. ರಾಜ್ಯ ಪೊಲೀಸ್‌ ಘಟಕಗಳಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಈಗಾಗಲೇ ತಾಕೀತು ಮಾಡಿದೆ. ಕರ್ನಾಟಕ, ಉತ್ತರ ಪ್ರದೇಶ ಮತ್ತು ದಿಲ್ಲಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಕೇರಳಕ್ಕೆ ಹೊಂದಿಕೊಂಡಿರುವ ಮಂಗಳೂರಿನ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ. ಜನನಿಬಿಡ ಪ್ರದೇಶಗಳಾದ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಯಾಣಿಕರನ್ನು ಮತ್ತು ಲಗೇಜ್‌ ಬ್ಯಾಗ್‌ಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅನುಮಾನ ಬಂದವರನ್ನು ವಿಚಾರಣೆ ನಡೆಸಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಬಂದೋಬಸ್ತ್ ಮಾಡಲಾಗಿದೆ. ವಿಧಾನಸೌಧ, ಹೈಕೋರ್ಟ್‌ಗೂ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಗುಪ್ತಚರ ಸಂಸ್ಥೆಗಳೊಂದಿಗೆ ಪೊಲೀಸ್‌ ಇಲಾಖೆ ನಿರಂತರ ಸಂಪರ್ಕದಲ್ಲಿದೆ. ಯಾವುದೇ ಮಾಹಿತಿಯನ್ನು ಲಘುವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next