ಕೇರಳ : ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಆಂಧ್ರಪ್ರದೇಶದ ಬಸ್ ಶನಿವಾರ ಕೇರಳದ ಪಥನಂತಿಟ್ಟ ಬಳಿ ಪಲ್ಟಿಯಾದ ಪರಿಣಾಮ ಕನಿಷ್ಠ 18 ಮಂದಿ ಗಾಯಗೊಂಡಿದ್ದಾರೆ.
ಆಂಧ್ರದಿಂದ ಶಬರಿಮಲೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು. ಹದಿನೆಂಟು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಎಲ್ಲ ಜನರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.
ಶಬರಿಮಲೆಯಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಿದ್ದು ಪ್ರತೀ ವರ್ಷ ಲಕ್ಷಾಂತರ ಮಂದಿ ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ, ಅದರಂತೆ ಆಂಧ್ರದ ಭಕ್ತರ ತಂಡ ಶಬರಿಮಲೆಗೆ ಹೊರಟಿತ್ತು ಕೇರಳದ ಪಥನಂತಿಟ್ಟ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಇದನ್ನೂ ಓದಿ : ಮುಂಬೈ-ಗೋವಾ ಹೆದ್ದಾರಿ ಬದಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ