ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎರಡು ವಾರಗಳ ಕಾಲ ವೈದ್ಯಕೀಯ ಚಿಕಿತ್ಸೆಗಾಗಿ ಶನಿವಾರ ಅಮೆರಿಕಕ್ಕೆ ತೆರಳಿದ್ದಾರೆ.ಸಿಎಂ ಜತೆ ಅವರ ಪತ್ನಿ ಹಾಗೂ ಆಪ್ತ ಸಹಾಯಕ ಇದ್ದಾರೆ.
ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಯಾರಿಗೂ ಅಧಿಕಾರ ಹಸ್ತಾಂತರಿಸಿಲ್ಲ. ಸಿಎಂ ಆಪ್ತ ಮೂಲಗಳ ಮೂಲಗಳ ಪ್ರಕಾರ, ವಿಜಯನ್ ತಮ್ಮ ಅಧಿಕೃತ ಕರ್ತವ್ಯಗಳನ್ನು ಆನ್‌ಲೈನ್‌ನಲ್ಲೇ ನಿರ್ವಹಿಸುತ್ತಾರೆ ಎಂದು ತಿಳಿದು ಬಂದಿದೆ. ಚಿಕಿತ್ಸೆ ಮುಗಿಸಿ ಜನವರಿ 29ರಂದು ರಾಜ್ಯಕ್ಕೆ ಮರಳಲಿದ್ದಾರೆ.
2018 ರಲ್ಲಿ, ಅವರು ಯುಎಸ್‌ನ ಮಿನ್ನೇಸೋಟಾದ ಮೇಯೊ ಕ್ಲಿನಿಕ್‌ನಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು.ವಿಜಯನ್ ಈಗ ಹೆಚ್ಚಿನ ಚಿಕಿತ್ಸೆ ಮತ್ತು ಪರೀಕ್ಷೆಗಾಗಿ ಹೋಗುತ್ತಿದ್ದಾರೆ.