Advertisement
ಮೂಲಗಳ ಪ್ರಕಾರ, ಬೊಮ್ಮಾಯಿ ಮತ್ತು ಪಿಣರಾಯಿ ಗಡಿ ಭಾಗದ ಅಭಿವೃದ್ಧಿ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು.
Related Articles
Advertisement
ಆದರೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ರಾತ್ರಿ ಸಂಚಾರಕ್ಕೆ ಮುಕ್ತಗೊಳಿಸಲು ಸಾಧ್ಯವಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದು ವರದಿಯಾಗಿದೆ.
ಇದರೊಂದಿಗೆ ಹಳೆಯ ಯೋಜನೆಯಾದ ತಲಚೇರಿ- ಮೈಸೂರು ರೈಲು ಯೋಜನೆಯನ್ನೂ ಪ್ರಸ್ತಾಪಿಸಿದರು. ಆದರೆ ಈ ಯೋಜನೆಯ ರೈಲು ಮಾರ್ಗವು ಬಂಡಿಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮಧ್ಯಭಾಗದಲ್ಲಿ ಹಾದು ಹೋಗುವುದರಿಂದ ಅಲ್ಲಿನ ವನ್ಯ ಜೀವಿ ಸಂಪತ್ತು ಹಾಗೂ ಅರಣ್ಯ ಸಂಪತ್ತಿಗೆ ಹಾನಿಯಾಗುವುದು. ಆದ್ದರಿಂದ ಇದಕ್ಕೆ ಸಮ್ಮತಿಸಲು ಸಾಧ್ಯವಿಲ್ಲ ಎಂದು ತಿಳಿಸಲಾಯಿತು. ಆಗ ಭೂಗತ ರೈಲು ಮಾರ್ಗ ನಿರ್ಮಿಸುವ ಕುರಿತು ಕೇರಳ ಸರ್ಕಾರವು ಪ್ರಸ್ತಾಪಿಸಿತು. ಆದರೆ ಇದರಿಂದಲೂ ನಿರ್ಮಾಣ ಚಟುವಟಿಕೆ ಸಂದರ್ಭದಲ್ಲಿ ಪರಿಸರ ಹಾನಿಯಾಗುವುದು . ಆದ್ದರಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಯಿತು.