ತಿರುವನಂತಪುರಂ: ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ಹೈಕೋರ್ಟ್ ಮೇಲ್ವಿಚಾರಣೆಯ ಸಿಬಿಐ ತನಿಖೆಗೆ ವಹಿಸಬೇಕೆಂಬ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಯ ಬೇಡಿಕೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ (ಜುಲೈ 21) ತಳ್ಳಿಹಾಕಿದ್ದಾರೆ.
ಇದನ್ನೂ ಓದಿ:ಮೂರು ದಶಕ ಕಂಡ ನಿಲ್ದಾಣದಲ್ಲಿ ಕನಿಷ್ಠ ಎರಡು ರೈಲೂ ನಿಲ್ಲುತ್ತಿಲ್ಲ!
ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ತನಿಖೆಯ ವೇಳೆ, ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ, ಅವರ ಕುಟುಂಬ ಸದಸ್ಯರು ಮತ್ತು ಕೆಲವು ಅಧಿಕಾರಿಗಳು ಶಾಮೀಲಾಗಿರುವುದಾಗಿ ಗಂಭೀರವಾಗಿ ಆರೋಪಿಸಿದ್ದರು.
ಚಿನ್ನಕಳ್ಳ ಸಾಗಣೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬ ವಿಪಕ್ಷ ನಾಯಕ ವಿ.ಡಿ. ಸತೀಶನ್ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಪಿಣರಾಯಿ ವಿಜಯನ್, ಚಿನ್ನಕಳ್ಳಸಾಗಣೆ ಪ್ರಕರಣ ಸಂಪೂರ್ಣವಾಗಿ ಕೇಂದ್ರದ ವ್ಯಾಪ್ತಿಗೆ ಸೇರಿದ್ದು, ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ. ಈ ನಿಟ್ಟಿನಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸಿ ಎಂದು ಮನವಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಇದೊಂದು ರಾಜ್ಯ ಸರ್ಕಾರದಕ್ಕೆ ಸಂಬಂಧಪಟ್ಟ ವಿಷಯವಲ್ಲ. ಚಿನ್ನಕಳ್ಳಸಾಗಣೆ ಕುರಿತು ತನಿಖೆ ನಡೆಸಿ ಎಂದು ಸಿಬಿಐಗೆ ಮನವಿ ಮಾಡಿಕೊಳ್ಳುವುದು ರಾಜ್ಯ ಸರ್ಕಾರದ ಕಾರ್ಯವಲ್ಲ. ಈಗಾಗಲೇ ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯ, ಎನ್ ಐಎ ಮತ್ತು ಕಸ್ಟಮ್ಸ್ ಇಲಾಖೆ ತನಿಖೆ ನಡೆಸುತ್ತಿದೆ ಎಂದು ಪಿಣರಾಯಿ ಸಮಜಾಯಿಷಿ ನೀಡಿರುವುದಾಗಿ ವರದಿ ವಿವರಿಸಿದೆ.