Advertisement

Kerala court ;ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 135 ವರ್ಷ ಜೈಲು ಶಿಕ್ಷೆ!

02:38 PM Jun 20, 2023 | Shreeram Nayak |

ಅಲಪ್ಪುಳ (ಕೇರಳ): ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ಕೇರಳ ನ್ಯಾಯಾಲಯವು  135 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

Advertisement

ಆರೋಪಿಯು ಎರಡು ವರ್ಷಗಳ ಹಿಂದೆ ತನ್ನ ಅಪ್ರಾಪ್ತ ವಯಸ್ಸಿನ ಸೋದರ ಸಂಬಂಧಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ.

ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಎಫ್‌ಟಿಎಸ್‌ಸಿ) ನ್ಯಾಯಾಧೀಶರಾದ ಸಜಿ ಕುಮಾರ್ ತೀರ್ಪು ಪ್ರಕಟಿಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಐಪಿಸಿ, ಐಟಿ ಕಾಯ್ದೆ, ಬಾಲಾಪರಾಧಿ ನ್ಯಾಯಾಂಗ ಕಾಯ್ದೆ ಸೇರಿದಂತೆ ಹಲವು ಕಾಯ್ದೆಗಳ ಅಡಿಯಲ್ಲಿ ಅಪರಾಧಿಗೆ 135 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದಾರೆ.

ನ್ಯಾಯಾಲಯವು ಆರೋಪಿಗೆ ಗರಿಷ್ಠ ಜೈಲು ಶಿಕ್ಷೆಯ ಜೊತೆಗೆ 5.1 ಲಕ್ಷ ರೂ. ದಂಡ ವಿಧಿಸಿದ್ದು. ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next