Advertisement
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಫೆ. 25ರಂದು ಮಂಗಳೂರಿಗೆ ಆಗಮಿಸುವುದನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣಾ ವೇದಿಕೆ ಆಶ್ರಯದಲ್ಲಿ ಶುಕ್ರವಾರ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆದ ಪ್ರತಿಭಟನ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೇರಳದಲ್ಲಿ ಎಲ್ಲದಕ್ಕೂ ಸಿಪಿಎಂ ನಿರ್ಧಾರವೇ ಅಂತಿಮ ಎನ್ನುವ ಮಟ್ಟಕ್ಕೆ ಬೆಳೆದು ನಿಂತಿದೆ. ಮಾತಾ ಅಮೃತಾನಂದಮಯಿ ಅವರ ಸಂಘಟನೆ ಕಾರ್ಯಕ್ರಮಗಳಿಗೆ ಅಲ್ಲಿ ಅವಕಾಶ ನೀಡುತ್ತಿಲ್ಲ. ಎಸ್‌ಎನ್‌ಡಿಪಿ ಕಾರ್ಯಕ್ರಮ ಮಾಡಲು ಅವಕಾಶ ನೀಡುತ್ತಿಲ್ಲ. ಸಾಮಾಜಿಕ ಸಮಾನತೆ ಸಾರಿದ ನಾರಾಯಣ ಗುರುಗಳಿಗೆ ಅವಮಾನ ಮಾಡಲಾಗುತ್ತಿದೆ. ಜಾತಿ ಸಂಘಧಿಟನೆ ಮಾಡುವ ಹಾಗಿಲ್ಲ. ಕ್ರೀಡಾ ಚಟುವಟಿಕೆ ನಡೆಸುವ ಹಾಗಿಲ್ಲ ಎಂದವರು ಹೇಳಿದರು.
Related Articles
ರೋಹಿತ್ ವೇಮುಲ ಸಾವಿನ ಬಗ್ಗೆ ದೇಶಾದ್ಯಂತ ಪ್ರಚಾರ ನಡೆಸಿದ ಬುದ್ಧಿಜೀವಿ, ಸಾಹಿತಿಗಳು ಕೇರಳದ ಕಾಲೇಜುಗಳಲ್ಲಿ ಸಿಪಿಎಂ ನೇತೃತ್ವದ ವಿದ್ಯಾರ್ಥಿ ಸಂಘಟನೆಯವರು ದಲಿತ ವಿದ್ಯಾರ್ಥಿಗಳು ಹಾಗೂ ಇತರ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ದಮನೀಯ ನೀತಿ ಬಗ್ಗೆ ಯಾಕೆ ಚಕಾರ ಎತ್ತುತ್ತಿಲ್ಲ ಎಂದರು.
Advertisement
ಪ್ರಮುಖರಾದ ಕುಂಟಾರು ರವೀಶ ತಂತ್ರಿ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬಜರಂಗದಳದ ಮುಖಂಡ ಶರಣ್ ಪಂಪ್‌ವೆಲ್, ಬಿಎಂಎಸ್ ಪ್ರಮುಖರಾದ ನಾರಾಯಣ ಶೆಟ್ಟಿ, ಎಬಿವಿಪಿ ಮುಖಂಡ ಶ್ರೀಜಿತ್ ಶೆಟ್ಟಿ ಉಪಸ್ಥಿತರಿದ್ದರು.
ವಿಶ್ವಹಿಂದೂ ಪರಿಷತ್‌ನ ಪ್ರಮುಖರಾದ ಪ್ರೊ| ಎಂ.ಬಿ. ಪುರಾಣಿಕ್ ಪ್ರಸ್ತಾವಿಸಿದರು. ಹಿಂದೂ ಜಾಗರಣ ವೇದಿಕೆ ಪ್ರಮುಖ ಕಿಶೋರ್ ಕುಮಾರ್ ಸ್ವಾಗತಿಸಿದರು. ಜಗದೀಶ ಶೇಣವ ಕಾರ್ಯಕ್ರಮ ನಿರೂಪಿಸಿದರು.
ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಶಾಸಕ ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮನಪಾ ಉಪಮೇಯರ್ ಸುಮಿತ್ರಾ ಕರಿಯ, ಪ್ರಮುಖರಾದ ಕೃಷ್ಣ ಜೆ. ಪಾಲೆಮಾರ್, ಎನ್. ಯೋಗೀಶ್ ಭಟ್, ಪದ್ಮನಾಭ ಕೊಟ್ಟಾರಿ, ನಾಗರಾಜ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಪ್ರಭಾಕರ ಬಂಗೇರ, ವಿಲಾಸ್ ನಾಯಕ್, ಅಂಗಾರ ಶ್ರೀಪಾದ, ಮೋನಪ್ಪ ಭಂಡಾರಿ, ರಘುಪತಿ ಭಟ್ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಗೂ ಮುನ್ನ ನಗರದ ಅಂಬೇಡ್ಕರ್ ವೃತ್ತದಿಂದ ಕೇಂದ್ರ ಮೈದಾನದ ವರೆಗೆ ಪ್ರತಿಭಟನ ಮೆರವಣಿಗೆ ಸಾಗಿ ಬಂತು.