Advertisement

TDB; ಶಬರಿಮಲೆ ಭಕ್ತರಿಗೆ ನೀರು, ಆಹಾರ ಸೌಲಭ್ಯಗಳನ್ನು ಖಚಿತಪಡಿಸಿ: ಹೈಕೋರ್ಟ್

07:47 PM Dec 25, 2023 | Team Udayavani |

ಕೊಚ್ಚಿ: ವಾರ್ಷಿಕ ಯಾತ್ರೆಗಾಗಿ ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ತೆರಳುವ ಭಕ್ತರಿಗೆ ನೀರು,ಆಹಾರ ಮತ್ತು ಇತರ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಒದಗಿಸುವಂತೆ ಕೇರಳ ಹೈಕೋರ್ಟ್ ಸೋಮವಾರ ವಿಶೇಷ ಸಭೆ ನಡೆಸಿ ತಿರುವಾಂಕೂರು ದೇವಸ್ವಂ ಮಂಡಳಿಗೆ ನಿರ್ದೇಶನ ನೀಡಿದೆ.

Advertisement

ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಜಿ. ಗಿರೀಶ್ ಅವರ ಪೀಠವು ವಿಶೇಷ ಅಧಿವೇಶನ ನಡೆಸಿ, ಮಕ್ಕಳು ಸೇರಿದಂತೆ ಭಕ್ತರು ಶಬರಿಮಲೆಗೆ ಹೋಗುವ ರಸ್ತೆಗಳಲ್ಲಿ ಸುಮಾರು 12 ಗಂಟೆಗಳ ಕಾಲ ಆಹಾರ ಮತ್ತು ನೀರಿಲ್ಲದೆ ಸಿಲುಕಿಕೊಂಡು ಪರದಾಡಿದ್ದಾರೆ ಎಂಬ ಸುದ್ದಿ ವರದಿಗಳನ್ನು ಗಮನಕ್ಕೆ ತಂದರು.

ಯಾತ್ರಾರ್ಥಿಗಳಿಗೆ ಅಲ್ಪಾವಧಿಯ ತಂಗುದಾಣವಾಗಿರುವ ಎಡತಾವಲಮ್‌ಗಳಲ್ಲಿ ನೀರು, ತಿಂಡಿ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಪೀಠವು ತಿರುವಾಂಕೂರು ದೇವಸ್ವಂ ಮಂಡಳಿಗೆ (ಟಿಡಿಬಿ) ನಿರ್ದೇಶನ ನೀಡಿದೆ. ದೇಗುಲ ಮತ್ತು ಸುತ್ತಮುತ್ತಲಿನ ಜನಸಂದಣಿ ನಿಯಂತ್ರಣ ಕಾರ್ಯಾಚರಣೆಗಳನ್ನು ಸಂಪೂರ್ಣ ಮೇಲ್ವಿಚಾರಣೆ ಮಾಡಲು ಮತ್ತು ಅಗತ್ಯವಿದ್ದರೆ ಹೆಚ್ಚುವರಿ ಪೊಲೀಸ್ ಸಿಬಂದಿಗಳನ್ನು ನಿಯೋಜಿಸಲು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನ್ಯಾಯಾಲಯ ಸೂಚಿಸಿದೆ. ಎಂದು ಈ ವಿಷಯಕ್ಕೆ ಸಂಬಂಧಿಸಿದ ವಕೀಲರು ತಿಳಿಸಿದ್ದಾರೆ.

ಶಬರಿಮಲೆಯಲ್ಲಿ ಭಾರೀ ಜನದಟ್ಟಣೆಯಿಂದಾಗಿ ಯಾತ್ರಾರ್ಥಿಗಳು ಪರದಾಡುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next