Advertisement

Kerala High Court; ಅಪ್ರಾಪ್ತ ವಯಸ್ಕಳ ಗರ್ಭಪಾತಕ್ಕೆ ಅನುಮತಿ

03:23 PM May 22, 2023 | Team Udayavani |

ತಿರುವನಂತಪುರಂ: ಸಹೋದರನಿಂದಲೇ ಗರ್ಭಿಣಿಯಾಗಿದ್ದ ಅಪ್ರಾಪ್ತ ವಯಸ್ಕ ಬಾಲಕಿಗೆ ಗರ್ಭಪಾತ ಮಾಡಿಸಿಕೊಳ್ಳಲು ಕೇರಳ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ. ಗರ್ಭಪಾತಕ್ಕೆ ಅವಕಾಶ ನೀಡದಿದ್ದರೆ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯ ಹೇಳಿದೆ.

Advertisement

ಅಪ್ರಾಪ್ತ ಬಾಲಕಿಯ ತಂದೆ ಆಕೆಯ ಗರ್ಭಪಾತಕ್ಕೆ ಅವಕಾಶ ಮಾಡಿ ಕೊಡಿಸುವಂತೆ ಕೋರಿದ್ದರು.ವೈದ್ಯಕೀಯ ಮಂಡಳಿ ಸಲ್ಲಿಸಿದ ವರದಿಯನ್ನು ಆಧರಿಸಿ ನ್ಯಾಯಮೂರ್ತಿ ಜಿಯಾದ್ ರಹಮಾನ್ ಅವರ ಏಕ ಪೀಠ ಈ ನಿರ್ಧಾರ ಕೈಗೊಂಡಿದೆ.

ವೈದ್ಯಕೀಯ ವರದಿಯನ್ನು ಪರಿಶೀಲಿಸಿದಾಗ, ಮಗುವು ದೈಹಿಕವಾಗಿ ಮತ್ತು ಮಾನಸಿಕವಾಗಿ ಗರ್ಭಧಾರಣೆಯ ವೈದ್ಯಕೀಯ ಮುಕ್ತಾಯಕ್ಕೆ ಯೋಗ್ಯವಾಗಿದೆ ಎಂಬುದು ಸ್ಪಷ್ಟವಾಗಿದೆ. ಗರ್ಭಧಾರಣೆಯ ಮುಂದುವರಿಕೆ ಬಾಲಕಿಯ ಸಾಮಾಜಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಗಂಭೀರವಾದ ಪರಿಣಾಮವನ್ನು ಉಂಟುಮಾಡುವ ಸಾಧ್ಯತೆಯಿದೆ ಎಂದು ಕೋರ್ಟ್ ಹೇಳಿದೆ. ವೈದ್ಯಕೀಯ ಮಂಡಳಿ ಪ್ರಕಾರ ಬಾಲಕಿ ಜೀವಂತ ಮಗುವಿಗೆ ಜನ್ಮ ನೀಡುವ ಸಾಧ್ಯತೆ ಇತ್ತು.ಅಂತಹ ಸಂದರ್ಭಗಳಲ್ಲಿ, ಅರ್ಜಿದಾರರ ಮಗಳ ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯವನ್ನು ಅನುಮತಿಸಲು ನಾನು ಒಲವು ತೋರುತ್ತೇನೆ” ಎಂದು ನ್ಯಾಯಾಧೀಶರು ಮೇ 19 ರ ತಮ್ಮ ಆದೇಶದಲ್ಲಿ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next