Advertisement

Kerala Incident: ಕೇರಳ ಸರಣಿ ಸ್ಫೋಟ… ಮೃತರ ಸಂಖ್ಯೆ 3ಕ್ಕೆ ಏರಿಕೆ, ಇಂದು ಸರ್ವಪಕ್ಷ ಸಭೆ

09:58 AM Oct 30, 2023 | sudhir |

ಕೊಚ್ಚಿ: ಕೇರಳದಲ್ಲಿ ಸಂಭವಿಸಿದ ಸರಣಿ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿಯೊಬ್ಬಳು ಸೋಮವಾರ ಮೃತಪಟ್ಟಿದ್ದಾಳೆ, ಇದರಿಂದ ಕೇರಳ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

Advertisement

ಎರ್ನಾಕುಲಂನ ಕಲಮಸ್ಸೆರಿಯಲ್ಲಿ ಭಾನುವಾರ ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನಾ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಸರಣಿ ಸ್ಫೋಟ ಸಂಭವಿಸಿ ಹಲವು ಮಂದಿ ಗಂಭೀರ ಗಾಯಗೊಂಡು ಕೇರಳದ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದರು ಅದರಲ್ಲಿ ಇಬ್ಬರು ಭಾನುವಾರ ಮೃತಪಟ್ಟರೆ ಹನ್ನೆರಡು ವರ್ಷದ ಬಾಲಕಿ ಸೋಮವಾರ ಮುಂಜಾನೆ ಮೃತಪಟ್ಟಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ತಿಳಿಸಿದೆ. ಘಟನೆಯಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಕೇರಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಇಂದು ಸರ್ವಪಕ್ಷ ಸಭೆ:
ಕೇರಳದ ಎರ್ನಾಕುಲಂನಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದ ತನಿಖೆಯನ್ನು 20 ಸದಸ್ಯರ ತಂಡ ನಡೆಸಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಹೇಳಿದ್ದಾರೆ. ಅಲ್ಲದೆ, ಪ್ರಕರಣದ ಕುರಿತು ಎಫ್‌ಐಆರ್ ಕೂಡ ದಾಖಲಾಗಿದೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಸರ್ವಪಕ್ಷ ಸಭೆ ನಡೆಯಲಿದ್ದು, ಸ್ಫೋಟದ ಹಿಂದಿರುವವರ ಪತ್ತೆಗೆ ಪ್ರಯತ್ನಿಸಲಾಗುವುದು ಎಂದು ವಿಜಯನ್ ಹೇಳಿದ್ದಾರೆ.

 

Advertisement

ಇದನ್ನೂ ಓದಿ: Raids: ಬೆಳ್ಳಂಬೆಳಗ್ಗೆ ರಾಮನಗರ, ಚಿತ್ರದುರ್ಗದಲ್ಲಿ ಲೋಕಾಯುಕ್ತ ದಾಳಿ… ದಾಖಲೆಗಳ ಪರಿಶೀಲನೆ

Advertisement

Udayavani is now on Telegram. Click here to join our channel and stay updated with the latest news.

Next