ತಿರುವನಂತಪುರಂ: ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇರಳದಲ್ಲಿ ಇನ್ನೂ ಹತ್ತು ದಿನಗಳ ಕಾಲ ರಾಜ್ಯಾದ್ಯಂತ ಲಾಕ್ ಡೌನ್ ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ(ಮೇ 29) ತಿಳಿಸಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ : ಮೇ 31 ರಿಂದ ಜೂನ್ 7 ರವರೆಗೆ ಸಂಪೂರ್ಣ ಲಾಕ್ ಡೌನ್
ಕೋವಿಡ್ 19 ಸೋಂಕು ತಡೆಗಟ್ಟಲು ಕೆಲವು ದಿನಗಳ ಹಿಂದಷ್ಟೇ ಮೇ 31ರವರೆಗೆ ಲಾಕ್ ಡೌನ್ ವಿಸ್ತರಿಸಿತ್ತು. ಆದರೆ ಈ ಬಾರಿ ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಈ ಕಾರಣದಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಜೆ 5ಗಂಟೆವರೆಗೆ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಕಡಿಮೆ ಸಂಖ್ಯೆಯ ಕಾರ್ಮಿಕರೊಂದಿಗೆ ಕೈಗಾರಿಕೆಗಳ ಚಟುವಟಿಕೆ ನಡೆಸಲು ಅವಕಾಶ ನೀಡಲಾಗುವುದು ಎಂದು ವರದಿ ತಿಳಿಸಿದೆ.
ಕಳೆದ 24ಗಂಟೆಗಳಲ್ಲಿ ಕೇರಳದಲ್ಲಿ 23,513 ಕೋವಿಡ್ 19 ಪ್ರಕರಣಗಳು ವರದಿಯಾಗಿದೆ. 1,41,759 ಸ್ಯಾಂಪಲ್ಸ್ ಪರೀಕ್ಷಿಸಲಾಗಿದೆ. 198 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 28,100 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿರುವುದಾಗಿ ಅಂಕಿಅಂಶ ತಿಳಿಸಿದೆ.
ಮಲಪ್ಪುರಂ ಜಿಲ್ಲೆಯಲ್ಲಿ ಜಾರಿಗೊಳಿಸಿದ್ದ ಹೆಚ್ಚುವರಿ ನಿರ್ಬಂಧಗಳನ್ನು ಹಿಂಪಡೆಯಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದರಿಂದ ಮೂರು ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಮೇ 21ರಂದು ತಿರುವನಂತಪುರಂ, ಎರ್ನಾಕುಲಂ, ತ್ರಿಶ್ಶೂರ್ ಮತ್ತು ಮಲಪ್ಪುರಂನಲ್ಲಿ ತ್ರಿವಳಿ ಲಾಕ್ ಡೌನ್ ಜಾರಿ ಮಾಡಲಾಗಿತ್ತು.