Advertisement

ಕೇರಳ ಅರಣ್ಯದಲ್ಲಿ ಸ್ಫೋಟಕ ಪತ್ತೆ: ಪಿಎಫ್ಐ ನಂಟು ಶಂಕೆ

10:28 PM Jun 15, 2021 | Team Udayavani |

ನವದೆಹಲಿ: ಕೇರಳದ ಅರಣ್ಯ ಪ್ರದೇಶವೊಂದರಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಇದರ ಹಿಂದೆ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ಭಾಗಿಯಾಗಿರುವ ಕುರಿತು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

Advertisement

ಪಥನಪುರಂನ ಕೇರಳ ಅರಣ್ಯ ಅಭಿವೃದ್ಧಿ ನಿಗಮದ ವ್ಯಾಪ್ತಿಯ ಗೇರು ತೋಟದಲ್ಲಿ ಮಂಗಳವಾರ ಎರಡು ಜಿಲೆಟಿನ್‌ ಕಡ್ಡಿ, 4 ಡಿಟೋನೇಟರ್‌, ಬ್ಯಾಟರಿ ಹಾಗೂ ಕೆಲವೊಂದು ವಯರ್‌ಗಳು ಪತ್ತೆಯಾಗಿವೆ. ಈ ಪ್ರದೇಶದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುವ ಸಲುವಾಗಿ ಈ ಸ್ಫೋಟಕಗಳನ್ನು ತಂದಿಟ್ಟಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಅರಣ್ಯದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವ ಕುರಿತು ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಕುರಿತು ತನಿಖೆ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next