ಕೇರಳ: ನಿಪಾ ವೈರಸ್‌ನಿಂದ ಬುಧವಾರ ಇಬ್ಬರು ಸಾವನ್ನಪ್ಪಿದ ಕೇರಳದ ಕೋಝಿಕೋಡ್‌ನಲ್ಲಿ ಏಳು ಗ್ರಾಮ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದ್ದು ಜೊತೆಗೆ ಸೋಂಕು ಹರಡುವುದನ್ನು ತಡೆಯಲು ಕ್ರಮಗಳನ್ನು ಬಲಪಡಿಸಲಾಗಿದೆ ಎಂದು ಕೇರಳ ಸರ್ಕಾರ ಬುಧವಾರ ಹೇಳಿದೆ.
ಕೋಝಿಕ್ಕೋಡ್ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕ ಸೇರಿದಂತೆ ನಾಲ್ವರಲ್ಲಿ ನಾಲ್ಕು ನಿಪಾ ಪ್ರಕರಣಗಳು ದೃಢಪಟ್ಟ ನಂತರ ರಾಜ್ಯ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಪೀಡಿತ ಪ್ರದೇಶಗಳಲ್ಲಿ ಕೆಲವು ಶಾಲೆಗಳು ಮತ್ತು ಕಚೇರಿಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ.
ಅತಂಚೇರಿ, ಮಾರುತೊಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಸೋಂಕಿತ ಬಾವಲಿಗಳು, ಹಂದಿಗಳು ಅಥವಾ ಇತರ ಜನರ ದೈಹಿಕ ದ್ರವಗಳ ನೇರ ಸಂಪರ್ಕದ ಮೂಲಕ ಮನುಷ್ಯರಿಗೆ ಹರಡುವ ನಿಪಾ ವೈರಸ್‌ಗಾಗಿ ಇದುವರೆಗೆ 130 ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿದೆ ಎಂದು ಕೇರಳದ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ನಿಪಾ ಎಚ್ಚರಿಕೆಯ ನಡುವೆ, ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ತಂಡಗಳು ಕೇರಳಕ್ಕೆ ಆಗಮಿಸಲಿದ್ದು, ನಿಪಾ ಪರೀಕ್ಷೆ ಮತ್ತು ಬಾವಲಿಗಳ ಸಮೀಕ್ಷೆಯನ್ನು ನಡೆಸಲು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಮೊಬೈಲ್ ಲ್ಯಾಬ್ ಅನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಇದನ್ನೂ ಓದಿ: Crazy Star Ravichandran: ನಾನು ಸಿನಿಮಾ ನಿರ್ದೇಶಿಸೋದು ದಾಖಲೆಗೆ, ಹೊಸತನಕ್ಕೆ..