Advertisement

Kerala: ಪ್ರೊಫೆಸರ್‌ ಕೈ ಕಟ್‌ ಕೇಸು: 13 ವರ್ಷ ಬಳಿಕ ಸೂತ್ರಧಾರಿ ಸೆರೆ

01:37 AM Jan 11, 2024 | Team Udayavani |

ಹೊಸದಿಲ್ಲಿ: 2010ರ ಕೇರಳ ಪ್ರಾಧ್ಯಾಪಕರ ಅಂಗೈ ಕತ್ತರಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸವದ್‌ನನ್ನು ಕಣ್ಣೂರಿನ ಮಟ್ಟನ್ನೂರಿನಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ. ಕಾಲೇಜಿನ ಪ್ರಶ್ನೆ ಪತ್ರಿಕೆಯಲ್ಲಿ ಪ್ರವಾದಿ ಮೊಹಮ್ಮದ್‌ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಕೇರಳದ ಮೂವತ್ತುಫ‌ುಝದ ಕಾಲೇಜಿನಲ್ಲಿ ಪ್ರೊ| ಟಿ.ಜೆ.ಜೋಸೆಫ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಮುಂಗೈ ಕತ್ತರಿಸಲಾಗಿತ್ತು. ಪಿಎಫ್ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಈ ಕೃತ್ಯವೆಸಗಿದ್ದರು. ಈ ಘಟನೆ ರಾಷ್ಟ್ರಮಟ್ಟದಲ್ಲಿಯೂ ಸುದ್ದಿಯಾಗಿತ್ತು.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 19 ಮಂದಿ ಅಪರಾಧಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಈ ಪೈಕಿ ಮೂವರಿಗೆ ಜೀವಾವಧಿ ಶಿಕ್ಷೆ ಹಾಗೂ 10 ಮಂದಿ ಇತರ ಅಪರಾಧಿಗಳಿಗೆ 8 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next