Advertisement
ಶನಿವಾರ ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತೃಶೂರ್‌ಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದರೆ, ತಿರುವನಂತಪುರ, ಕೊಲ್ಲಂ, ಅಳಪ್ಪುಳ, ಪಾಲಕ್ಕಾಡ್, ಮಲಪ್ಪುರಂ, ಕಲ್ಲಿಕೋಟೆ ಮತ್ತು ವಯನಾಡ್‌ನಲ್ಲಿ ಆರೆಂಜ್ ಅಲರ್ಟ್ ಹಾಗೂ ಇನ್ನೂ ಎರಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮಂಗಳವಾರದವರೆಗೂ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
Related Articles
Advertisement
ಮಧ್ಯಪ್ರದೇಶದಲ್ಲಿ ಯೆಲ್ಲೋ ಅಲರ್ಟ್: ಮಧ್ಯಪ್ರದೇಶದಾದ್ಯಂತ ರವಿವಾರ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿರುವ ಕಾರಣ, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆಯ ಅಬ್ಬರ ಹೆಚ್ಚಲಿದೆ ಎಂದೂ ತಿಳಿಸಿದೆ.
ಸೇನೆ, ವಾಯುಪಡೆ ಆಗಮನಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕೋರಿಕೆ ಮೇರೆಗೆ ಭೂಸೇನೆ ಹಾಗೂ ವಾಯುಪಡೆಯ ಯೋಧರು ಕೇರಳಕ್ಕೆ ಆಗಮಿಸಿದ್ದು, ರಕ್ಷಣ ಕಾರ್ಯ ಆರಂಭಿಸಿದ್ದಾರೆ. ದಕ್ಷಿಣ ಏರ್ ಕಮಾಂಡ್‌ನ ಎಲ್ಲ ನೆಲೆಗಳಲ್ಲೂ ಎಂಐ- 17 ಹಾಗೂ ಸಾರಂಗ್ ಹೆಲಿಕಾಪ್ಟರ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ. 30 ಯೋಧರನ್ನು ಒಳಗೊಂಡ ಸೇನೆಯ ಒಂದು ತಂಡ ಕೊಟ್ಟಾಯಂನ ಕಾಂಜಿರಪ್ಪಾಳಿನ್‌ಗೆ ತೆರಳಿದೆ. ಬಸ್ ಮುಳುಗುತ್ತಿರುವ ವೀಡಿಯೋ ವೈರಲ್!
ಕೇರಳದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಪ್ರವಾಹದ ನೀರಿನಲ್ಲಿ ಮುಳುಗುತ್ತಿರುವಂಥ ಬೆಚ್ಚಿಬೀಳುವ ವೀಡಿಯೋವೊಂದು ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಳಗಿದ್ದ ಪ್ರಯಾಣಿಕರನ್ನು ರಕ್ಷಿಸಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ. ಇದರ ಬೆನ್ನಲ್ಲೇ ಪ್ರವಾಹಪೀಡಿತ ಪ್ರದೇಶಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಿದೆ. ಶಬರಿಮಲೆ ಯಾತ್ರೆಗೂ ಸಮಸ್ಯೆ
ಭಾರೀ ಮಳೆ, ಪ್ರವಾಹದ ಹಿನ್ನೆಲೆಯಲ್ಲಿ ಅಕ್ಟೋಬರ್ 19ರ ವರೆಗೂ ಶಬರಿಮಲೆ ಯಾತ್ರೆಗೆ ಅವಕಾಶ ನೀಡದಿರಲು ಸರಕಾರನಿರ್ಧರಿಸಿದೆ. ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಶನಿವಾರ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೇ ವೇಳೆ, ಅ.18ರಿಂದ ಆರಂಭವಾಗಬೇಕಾಗಿದ್ದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಅ.20ರ ಅನಂತರ ಪುನರಾರಂಭಿಸಲು ತೀರ್ಮಾನಿಸಲಾಗಿದೆ.