Advertisement

ಆರ್ ಎಸ್,ಎಸ್, ಬಿಜೆಪಿ ಮುಖಂಡರ ಹತ್ಯೆ; ಕೇರಳದ ಧೋರಣೆ ದೇಶಕ್ಕೆ ಅಪಾಯಕಾರಿ; ಏನಿದು ಆರೋಪ?

11:55 AM Apr 18, 2022 | Team Udayavani |

ನವದೆಹಲಿ: ಕೇರಳದಲ್ಲಿನ ಸನ್ನಿವೇಶ ದೇಶಕ್ಕೆ ಬಹಳ ಅಪಾಯಕಾರಿಯಾಗಿದ್ದು, ಈ ಕುರಿತು ಕ್ರಮ ತೆಗೆದುಕೊಳ್ಳುವಂತೆ ಕೇರಳದ ಬಿಜೆಪಿ ಘಟಕ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ಪಾಲಕ್ಕಾಡ್ ನಲ್ಲಿ ಹತ್ಯೆಗೀಡಾಗಿದ್ದ ಆರ್ ಎಸ್ ಎಸ್ ಮುಖಂಡ ಶ್ರೀನಿವಾಸ್ ಅವರ ಅಂತ್ಯ ಸಂಸ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್, ಕೇರಳದಲ್ಲಿನ ಪರಿಸ್ಥಿತಿ ತೀರಾ ಕಳವಳಕಾರಿಯಾಗಿದೆ ಎಂದು ಆರೋಪಿಸಿದ್ದಾರೆ.

ಇತ್ತೀಚೆಗೆ ಪಾಲಕ್ಕಾಡ್ ನ ಮೇಲಮುರಿಯಲ್ಲಿ ಆರ್ ಎಸ್ ಎಸ್ ಮುಖಂಡ ಶ್ರೀನಿವಾಸ್ ಅವರನ್ನು ಎಸ್ ಡಿಪಿಐ ಕಾರ್ಯಕರ್ತರು ಹತ್ಯೆಗೈದಿರುವುದಾಗಿ ವರದಿ ತಿಳಿಸಿದೆ. ಘಟನೆಯ ಹಿನ್ನೆಲೆಯಲ್ಲಿ ಏಪ್ರಿಲ್ 29ರಂದು ಕೇರಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ ಎಂದು ಸುರೇಂದ್ರನ್ ತಿಳಿಸಿದ್ದಾರೆ.

ರಾಜ್ಯದಲ್ಲಿನ ಇಸ್ಲಾಮ್ ಸಂಘಟನೆಗಳಿಗೆ ಕೇರಳ ರಾಜ್ಯಪಾಲರು ಬೆಂಬಲ ನೀಡುತ್ತಿರುವುದಾಗಿ ಸುರೇಂದ್ರನ್ ದೂರಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರ ಪೊಲೀಸರನ್ನು ತಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಪಾಲಕ್ಕಾಡ್ ನಲ್ಲಿ ಇತ್ತೀಚೆಗೆ ಆರ್ ಎಸ್ ಎಸ್, ಬಿಜೆಪಿ ಕಾರ್ಯಕರ್ತರನ್ನು ಹತ್ಯೆಗೈಯಲಾಗಿದೆ. ಈ ಸಂಚು ರೂಪಿಸಿದವರ ವಿರುದ್ಧ ಕೇರಳ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇದು ರಾಜ್ಯ ಸರ್ಕಾರದ ವೈಫಲ್ಯತೆಗೆ ಸಾಕ್ಷಿಯಾಗಿದೆ ಎಂದು ಸುರೇಂದ್ರನ್ ಹೇಳಿದರು.

Advertisement

ಶ್ರೀನಿವಾಸನ್ ಮೇಲಮುರಿಯಲ್ಲಿ ಎಸ್ ಕೆಎಸ್ ಆಟೋ ಸರ್ವೀಸ್ ಹೆಸರಿನ ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಉದ್ಯಮ ನಡೆಸುತ್ತಿದ್ದರು. ಕಳೆದ ಶುಕ್ರವಾರ ಏಕಾಏಕಿ ಸ್ಕೂಟರ್ ನಲ್ಲಿ ಬಂದ ದುಷ್ಕರ್ಮಿಗಳು ಶ್ರೀನಿವಾಸನ್ ಮೇಲೆ ಮಾರಕಾಯುಧಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದು. ಕೂಡಲೇ ಶ್ರೀನಿವಾಸನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರು ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next