Advertisement

Kerala ತ್ರಿವಳಿ ಸ್ಫೋಟ: ಗಂಭೀರ ಗಾಯಗೊಂಡಿದ್ದ ವೃದ್ದೆ ಮೃತ್ಯು, ಸಾವಿನ ಸಂಖ್ಯೆ 4ಕ್ಕೆ ಏರಿಕೆ

11:49 AM Nov 06, 2023 | Team Udayavani |

ಕೊಚ್ಚಿ: ಒಂದು ವಾರದ ಹಿಂದೆ ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಕೂಟದಲ್ಲಿ ಸಂಭವಿಸಿದ ಸ್ಫೋಟಗಳಲ್ಲಿ ಗಂಭೀರ ಗಾಯಗೊಂಡಿದ್ದ 61 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಇದರೊಂದಿಗೆ ಮೃತರ ಸಂಖ್ಯೆ ನಾಲ್ಕಕ್ಕೆ ಏರಿದೆ.

Advertisement

ಸಂತ್ರಸ್ತೆಯನ್ನು ಕಲಮಸ್ಸೆರಿಯ ಮೋಲಿ ಜಾಯ್ ಎಂದು ಗುರುತಿಸಲಾಗಿದ್ದು, ಸೋಮವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ.

ಅಕ್ಟೋಬರ್ 29 ರಂದು ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮಹಿಳೆ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಸೋಮವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಎರ್ನಾಕುಲಂ ಜಿಲ್ಲೆಯ ಮಲಯತ್ತೂರ್‌ನ ಲಿಬಿನಾ ಎಂಬ 12 ವರ್ಷದ ಬಾಲಕಿ ಕೂಡ ಅಕ್ಟೋಬರ್ 30 ರಂದು ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಅಷ್ಟು ಮಾತ್ರವಲ್ಲದೆ ಘಟನೆ ನಡೆದ ದಿನವೇ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು ಇದರೊಂದಿಗೆ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಕೇರಳದ ಕಲಮಸ್ಸೆರಿಯ ಅಂತಾರಾಷ್ಟ್ರೀಯ ಧಾರ್ಮಿಕ ಕೇಂದ್ರದಲ್ಲಿ ನಡೆದ ಬಹು ಸ್ಫೋಟಗಳ ಸಂದರ್ಭದಲ್ಲಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಇದನ್ನೂ ಓದಿ: INDvsSA ಕೋಲ್ಕತ್ತಾ ಪಂದ್ಯದಲ್ಲಿ ಬೆಸ್ಟ್ ಫೀಲ್ಡರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ?; Video

Advertisement

Udayavani is now on Telegram. Click here to join our channel and stay updated with the latest news.

Next