ತಿರುವನಂತಪುರಂ: ಅಬುಧಾಬಿಯಲ್ಲಿ ಕೆಲಸ ಮಾಡುತ್ತಿರುವ ಕೇರಳದ ನರ್ಸ್ವೊಬ್ಬರಿಗೆ ಅಬುಧಾಬಿಯ ಬಿಗ್ ಟಿಕೆಟ್ ಡ್ರಾದಲ್ಲಿ 20 ಮಿಲಿಯನ್ ಯುಎಇ ದಿರ್ಹಮ್ ಎಂದರೆ ಸುಮಾರು 45 ಕೋಟಿ ರೂ. ಗೆದ್ದಿದ್ದಾರೆ.
ಶನಿವಾರ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ ಲವ್ಸಿ ಮೋಲ್ ಅಚ್ಚಮ್ಮ ಗೆದ್ದಿದ್ದಾರೆ. ತನ್ನ ಕುಟುಂಬದೊಂದಿಗೆ ಕಳೆದ 21 ವರ್ಷಗಳಿಂದ ಅಬುಧಾಬಿಯಲ್ಲಿ ನೆಲೆಸಿದ್ದಾರೆ.
ತನ್ನ ಪತಿ ಪ್ರತಿ ತಿಂಗಳು ಅಬುಧಾಬಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗ್ ಟಿಕೆಟ್ ತೆಗೆದುಕೊಳ್ಳುತ್ತಿದ್ದರು ಎಂದು ತಿಳಿಸಿದ್ದಾರೆ.
ಬಹುಮಾನದ ಮೊತ್ತದ ಒಂದು ಭಾಗವನ್ನು ತನ್ನ ಕುಟುಂಬದೊಂದಿಗೆ ಹಂಚಿಕೊಳ್ಳುವುದಾಗಿ ಹೇಳಿದರು ಮತ್ತು ಬಾಕಿ ಹಣವನ್ನು ತನ್ನ ಮಕ್ಕಳ ಶಿಕ್ಷಣಕ್ಕೆ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
Related Articles
ಶನಿವಾರ ನಡೆದ ಇತರ ಡ್ರಾಗಳಲ್ಲಿ ನಾಲ್ವರು ಕೇರಳಿಗರು ಬಹುಮಾನ ಗೆದ್ದಿದ್ದಾರೆ.