Advertisement

ಕೆರೆಗಳು ಹಳ್ಳಿಗಳ ಜೀವನಾಡಿ

05:34 PM Sep 07, 2020 | Suhan S |

ಚಿಕ್ಕಮಗಳೂರು: ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಜನತೆಯು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಮಾಜಮುಖೀಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದು ಸಮಾಜಕ್ಕೆ ಬಹು ದೊಡ್ಡ ಕೊಡುಗೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು.

Advertisement

ಶನಿವಾರ ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ದೊಡ್ಡಕೆರೆ ಬಳಕೆದರರ ಸಂಘದ ಸಹಭಾಗಿತ್ವದಲ್ಲಿ ಕರ್ನಾಟಕ ಕೆರೆ ಸಂಜೀವಿನಿ ಕಾರ್ಯಕ್ರಮದಡಿ ಕರ್ತಿಕೆರೆ ದೊಡ್ಡಕೆರೆ ಹಸ್ತಾಂತರಿಸಿ ಅವರು ಮಾತನಾಡಿದರು.

ಕೆರೆಗಳು ಹಳ್ಳಿಗಳ ಜೀವನಾಡಿಯಾಗಿದ್ದು, ಕೆರೆ ತುಂಬಿದ್ದಲ್ಲಿ ಇಡೀ ಊರೇ ಸಂಪದ್ಭರಿತವಾಗಲಿದೆ ಎಂಬ ಮಾತಿನಂತೆಗ್ರಾಮೀಣ ಭಾಗದ ಕೆರೆಗಳು ಹೆಚ್ಚು ಮಹತ್ವ ಪಡೆದಿವೆ. ರಾಜ್ಯದಲ್ಲಿ ಬರಡು ಪ್ರದೇಶಗಳಲ್ಲಿ ಕೆರೆಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಕೆರೆಗಳ ಸಮರ್ಪಕ ನಿರ್ವಹಣೆಗಾಗಿ ನೂತನವಾಗಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ನೂತನ ಪ್ರಾ ಧಿಕಾರವನ್ನು ರಚಿಸಲಾಗಿದೆ. ಇದರ ಮೂಲಕ ಕೆರೆಗಳನ್ನು ಅಭಿವೃದ್ಧಿಪಡಿಸುವ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದ ಅವರು, ರಾಜ್ಯಾದ್ಯಂತ ಸುಮಾರು 146 ಕೆರೆಗಳಲ್ಲಿ ಕೆರೆ ಬಳಕೆದಾರರ ಸಂಘವನ್ನು ರಚಿಸಿ ಕೆರೆಗಳ ಹೂಳೆತ್ತಿ ಪುನಶ್ಚೇತನ ಗೊಳಿಸಲಾಗುತ್ತಿದ್ದು, ಅದರಂತೆ ಜಿಲ್ಲೆಯ ಕರ್ತಿಕೆರೆ ದೊಡ್ಡಕೆರೆ ನಿರ್ವಹಣೆಯನ್ನು ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಹಸ್ತಾಂತರಿಸಲಾಗಿದೆ ಎಂದರು.

ಸಂರಕ್ಷಣಾ ಯೋಜನೆಯಡಿ ಪುರಾತನ ದೇವಾಲಯಗಳ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಧರ್ಮೋತ್ಥಾನ ಟ್ರಸ್ಟ್‌ಗೆ ರೂ. 10 ಕೋಟಿ ಬಿಡುಗಡೆ ಮಾಡಲಾಗಿದ್ದು,ಈ ಮೂಲಕ ಪುರಾತತ್ವ ಇಲಾಖೆಗೆ ಸೇರಿದ ಹಳೇ ದೇವಾಲಯಗಳು, ಕಲ್ಯಾಣಿಗಳು, ಗೋಪುರಗಳನ್ನು ಸಂರಕ್ಷಿಸಲು ಯೋಜನೆ ರೂಪಿಸಲಾಗಿದೆ. ಜಿಲ್ಲೆಯಲ್ಲಿ ಕಳಸಾಪುರ  ಕಳಸೇಶ್ವರ, ಮುತ್ತಿನಪುರದ ವಿರೂಪಾಕ್ಷೇಶ್ವರ, ಚೆನ್ನಕೇಶ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳ ಜೀರ್ಣೋದ್ಧಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

Advertisement

ವಿಧಾನ ಪರಿಷತ್‌ ಶಾಸಕ ಎಸ್‌.ಎಲ್‌. ಭೋಜೇಗೌಡ, ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ತಾಪಂ ಅಧ್ಯಕ್ಷೆ ಶುಭಾ ಸತ್ಯಮೂರ್ತಿ, ಜಿಪಂ ಉಪಾಧ್ಯಕ್ಷ ಬಿ.ಜಿ. ಸೋಮಶೇಖರಪ್ಪ, ಜಿಪಂ ಸದಸ್ಯರಾದ ಜೆಸಿಂತಾ ಅನಿಲ್‌ಕುಮಾರ್‌, ಕವಿತಾ ಲಿಂಗರಾಜ್‌, ತಾಪಂ ಉಪಾಧ್ಯಕ್ಷೆ ಶಾರದಾ ಶಶಿಧರ್‌, ತಾಪಂ ಸದಸ್ಯ ಜಯಣ್ಣ, ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿಯ ಪ್ರಾದೇಶಿಕ ನಿರ್ದೇಶಕ ಶ್ರೀಹರಿ, ದೊಡ್ಡಕೆರೆ ಬಳಕೆದಾರರ ಸಂಘದ ಅಧ್ಯಕ್ಷ ಆನಂದ್‌ ರಾಜ್‌ ಅರಸ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next