ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ವೆಂಕ್ಯಾ ಹಾಗೂ ಕೆರೆಬೇಟೆ ಸಿನಿಮಾಗಳು ಆಯ್ಕೆಯಾಗಿವೆ. 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ. ಗೋವಾದಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯಾ ಸಿನಿಮೋತ್ಸವ’ ನವೆಂಬರ್ 20ರಿಂದ 28ರ ತನಕ ನಡೆಯಲಿದೆ. ಗೋವಾದ ಪಣಜಿಯಲ್ಲಿ ನಡೆಯುವ ಚಿತ್ರೋತ್ಸವದಲ್ಲಿ ದೇಶ ವಿದೇಶದ ಹಲವರು ಭಾಗಿಯಾಗಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ “ವೆಂಕ್ಯಾ’ ಹಾಗೂ “ಕೆರೆಬೇಟೆ’ ಪ್ರದರ್ಶನ ಕಾಣಲಿವೆ.
ಕೆರೆಬೇಟೆ
ಕೆರೆಬೇಟೆ ರಾಜಗುರು ನಿರ್ದೇಶನದಲ್ಲಿ ಮೂಡಿಬಂದಿರುವ ಚೊಚ್ಚಲ ಸಿನಿಮಾ. ಗೌರಿ ಶಂಕರ್ ನಾಯಕನಾಗಿ ಈ ಸಿನಿಮಾದಲ್ಲಿ ಮಿಂಚಿದ್ದಾರೆ. ನಟನೆ ಜೊತೆಗೆ ಗೌರಿ ಶಂಕರ್ ನಿರ್ಮಾಣದ ಜವಾಬ್ದಾರಿಯಮನ್ನು ವಹಿಸಿಕೊಂಡಿದ್ದರು. ತುಂಬಾ ಕಷ್ಟಪಟ್ಟು ಇಷ್ಟ ಪಟ್ಟು ಮಾಡಿದ ಸಿನಿಮಾವಿದು. ಕೆರೆಬೇಟೆ ಸಿನಿಮಾ ಬಗ್ಗೆ ಹೇಳುವುದಾದರೆ ಅಪ್ಪಟ ಹಳ್ಳಿ ಸೊಗಡಿನ ಚಿತ್ರ. ಈ ಸಿನಿಮಾ ಮಾರ್ಚ್ 15ಕ್ಕೆ ರಿಲೀಸ್ ಆಗಿತ್ತು. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿದ್ದ ಈ ಸಿನಿಮಾ ಮಲೆನಾಡಿನ ಮೀನು ಬೇಟೆ ಸಂಸ್ಕೃತಿಯನ್ನು ಪರಿಚಯಿಸಿತ್ತು. ಸಿನಿಮಾದಲ್ಲಿ ನಾಯಕ ಗೌರಿಶಂಕರ್ ನಾಯಕಿ ಬಿಂದು ಗೌಡ ಜೊತೆಗೆ ಗೋಪಾಲ್ ದೇಶಪಾಂಡೆ, ಸಂಪತ್ ಕುಮಾರ್ ಹರಿಣಿ ಸೇರಿದಂತೆ ಅನೇಕ ದೊಡ್ಡ ಕಲಾವಿದರು ಬಣ್ಣ ಹಚ್ಚಿದರು
ವೆಂಕ್ಯಾ
ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್ ನಲ್ಲಿ ವೆಂಕ್ಯಾ ಚಿತ್ರ ಮೂಡಿಬಂದಿದೆ. ವೆಂಕ್ಯಾನಿಗೆ ಸಾಗರ್ ಪುರಾಣಿಕ್ ಆ್ಯಕ್ಷನ್ ಕಟ್ ಹೇಳುವುದರ ಜೊತೆಗೆ ನಾಯಕರಾಗಿದ್ದಾರೆ. ಚಿತ್ರದಲ್ಲಿ ಸಾಗರ್ ಗೆ ಜೋಡಿಯಾಗಿ ಶಿಮ್ಲಾದ ರೂಪಾಲಿ ಸೂದ್ ಅಭಿನಯಿಸಿದ್ದಾರೆ. ಉತ್ತರ ಕರ್ನಾಟಕ ಕಥೆಯಾಧಾರಿಸಿತ ವೆಂಕ್ಯಾ ಸಿನಿಮಾವನ್ನು ಅಪೇಕ್ಷಾ ಮತ್ತು ಪವನ್ ನಿರ್ಮಾಣ ಮಾಡುತ್ತಿದ್ದಾರೆ. ಪವನ್ ಸ್ನೇಹಿತರಾದ ಅವಿನಾಶ್ ವಿರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ.