Advertisement

keregodu ಹನುಮ ಧ್ವಜ ತೆರವು ವಿಚಾರ: ಮೈಸೂರು/ ಗದಗದಲ್ಲಿ ಬಿಜೆಪಿ ಪ್ರತಿಭಟನೆ

12:45 PM Jan 29, 2024 | Team Udayavani |

ಮೈಸೂರು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಮೈಸುರು ಮತ್ತು ಗದಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿತು.

Advertisement

ಮೈಸೂರಿನ ಗಾಂಧಿ ವೃತ್ತದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ಬಿಜೆಪಿ ಅಧ್ಯಕ್ಷ ಎಲ್. ಆರ್. ಮಹದೇವಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಭಾಗಿಯಾದರು.

ಗದಗದಲ್ಲಿ ಪ್ರತಿಭಟನೆ: ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಗದಗ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದ ಎದುರು ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು, ಮುಖಂಡರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

Advertisement

ನಂತರ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಎಂ.ಎಸ್. ಕರೀಗೌಡ್ರ, ಜಗನ್ನಾಥಸಾ ಭಾಂಡಗೆ, ರವೀಂದ್ರನಾಥ ದಂಡಿನ, ಸುಧೀರ ಕಾಟಿಗೇರ ಸೇರಿದಂತೆ ನೂರಾರು ಕಾರ್ಯಕರ್ತರು, ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next