Advertisement
Related Articles
Advertisement
ಸಮಾರಂಭದಲ್ಲಿ ಶ್ರೀ ಮೂಕಾಂಬಿಕಾ ದೇವಸ್ಥಾನ ಘನ್ಸೋಲಿ ಇದರ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಬೋಂಬೆ ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಶ್ಯಾಮ್ ಎನ್. ಶೆಟ್ಟಿ, ಕನ್ನಡ ಕಲಾಕೇಂದ್ರ ಮುಂಬಯಿ ಅಧ್ಯಕ್ಷ ಬೈಲೂರು ಬಾಲಚಂದ್ರ ರಾವ್, ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್ ಟ್ರಸ್ಟ್ ನ ಉಪಕಾರ್ಯಾಧ್ಯಕ್ಷ ಪ್ರಭಾಕರ ಎಸ್. ಹೆಗ್ಡೆ, ಖ್ಯಾತ ಭಾಗವತರಾದ ಕು| ಕಾವ್ಯಶ್ರೀ ಅಜೇರು ಮೊದಲಾದವರನ್ನು ಸಮ್ಮಾನಿಸಲಾಯಿತು.
ಪ್ರಾರಂಭದಲ್ಲಿ ಶ್ರೀ ಶನೀಶ್ವರ ಮಂದಿರ ನೆರೂಲ್ ಇದರ ಪ್ರಧಾನ ಅರ್ಚಕ ಸೂರಜ್ ಭಟ್ ಅವರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಶ್ರೀ ಶನೀಶ್ವರ ಮಂದಿರ ನೆರೂಲ್ ಜತೆ ಕೋಶಾಧಿಕಾರಿ ಆದ್ಯಪಾಡಿ ಕರುಣಾಕರ ಎಸ್. ಆಳ್ವ, ತುಳುಕೂಟ ಐರೋಲಿ ಅಧ್ಯಕ್ಷ ಕೆ.ಕೆ. ಹೆಬ್ಟಾರ್, ಕರ್ನಾಟಕ ಸಂಘ ಪನ್ವೇಲ್ ಇದರ ಅಧ್ಯಕ್ಷ ಧನಂಜಯ ಶೆಟ್ಟಿ ಕೊಲ್ಪೆ, ಶ್ರೀ ಶನೀಶ್ವರ ಮಂದಿ ನೆರೂಲ್ ವಿಶ್ವಸ್ಥ ಕೃಷ್ಣ ಎಂ. ಪೂಜಾರಿ, ಉದ್ಯಮಿ ಜಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಮೇಳದ ಅಧ್ಯಕ್ಷ ಜಯಂತ್ ಅಮೀನ್, ಮುಂಬಯಿ ವ್ಯವಸ್ಥಾಪಕರಾದ ವಿ. ಕೆ. ಸುವರ್ಣ, ಪ್ರಭಾಕರ ಎಸ್. ಹೆಗ್ಡೆ ಅವರು ಉಪಸ್ಥಿತರಿದ್ದರು. ಜಗದೀಶ್ ಶೆಟ್ಟಿ ಪನ್ವೇಲ್ ಮತ್ತು ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ ಸಹಕರಿಸಿದರು. ವಿ. ಕೆ. ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು. ಮಕ್ಕಳ ಮೇಳದಿಂದ ಶ್ರೀನಿವಾಸ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಂಡಿತು. ಶ್ರೀ ಶನೀಶ್ವರ ಸೇವಾ ಸಮಿತಿ, ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್ ಟ್ರಸ್ಟ್, ರಂಗಭೂಮಿ ಫೈನ್‌ಆರ್ಟ್ಸ್ ಅವರ ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮವು ಜರಗಿತು. ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಇಂದು ಮಕ್ಕಳು ಪ್ರದರ್ಶಿಸಿದ ಶ್ರೀನಿವಾಸ ಕಲ್ಯಾಣ ಯಕ್ಷಗಾನವು ಉತ್ತಮವಾಗಿ ಮೂಡಿಬಂದಿದೆ. ಇದು ಅವರ ಕಲಾಚಾತುರ್ಯತೆಗೆ ಸಾಕ್ಷಿಯಾಗಿದೆ. ತಂಡಕ್ಕೆ ನಮ್ಮ ಪ್ರೋತ್ಸಾಹ ಸದಾಯಿದೆ – ಗೋಪಾಲ್ ವೈ. ಶೆಟ್ಟಿ .,
ಉಪಾಧ್ಯಕ್ಷರು, ಶ್ರೀ ಶನೀಶ್ವರ ಮಂದಿರ ನೆರೂಲ್ ಇಂದಿನ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿರುವ ಪ್ರಸ್ತುತ ದಿನಗಳಲ್ಲಿ ಕೆರೆಕ್ಕಾಡಿನ ಈ ಮಕ್ಕಳು ಇಂತಹ ಕಲಾತಂಡವನ್ನು ಕಟ್ಟಿ ಯಕ್ಷಗಾನವನ್ನು ಉಳಿಸಿ-ಬೆಳೆಸುವ ಕಾರ್ಯಮಾಡುತ್ತಿರುವುದು ನಿಜವಾಗಿಯೂ ಶ್ಲಾಘನೀಯ
– ಅನಿಲ್ ಹೆಗ್ಡೆ , ರಂಗಕಲಾವಿದ ಉತ್ತಮ ಸಂಘಟಕರು ಇರುವುದರಿಂದಾಗಿ ಮಕ್ಕಳಿಗೆ ಉತ್ತಮ ರೀತಿಯಲ್ಲಿ ಯಕ್ಷಗಾನವನ್ನು ಪ್ರದರ್ಶಿಸಲು ಸಾಧ್ಯವಾಗುತ್ತಿದೆ. ಮಕ್ಕಳಿಗೆ ನಾವು ಪ್ರೋತ್ಸಾಹ ನೀಡಬೇಕು. ಅವರು ಈ ಕಲೆಯನ್ನು ಉಳಿಸಿ-ಬೆಳೆಸುವಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ
– ಜಗದೀಶ್ ಶೆಟ್ಟಿ ನಂದಿಕೂರು, ಉಪಾಧ್ಯಕ್ಷರು,ಘನ್ಸೋಲಿ
ಶ್ರೀ ಮೂಕಾಂಬಿಕಾ ಮಂದಿರ ಚಿತ್ರ-ವರದಿ : ಸುಭಾಷ್ ಶಿರಿಯಾ