ಕಾಪು: ಸ್ವಾತಂತ್ರ್ಯೋತ್ಸವದ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದಡಿ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಜು. 23 ರಂದು ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟ ನಡೆಯಿತು.
ಕಾಪು ಜನಾರ್ದನ ದೇವಸ್ಥಾನ ಬಳಿಯ ಗದ್ದೆಯಲ್ಲಿ ನಡೆದ ಕ್ರೀಡಾಕೂಟವನ್ನು ಗದ್ದೆಯ ಮಾಲಕ ದಯಾನಂದ ದೇವಾಡಿಗ ಅವರು ಉದ್ಘಾಟಿಸಿದರು.
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಪ್ರಬಂಧಕ ದಿವಾಕರ್ ಕಾಪು, ವಿಭಾಗ ಮುಖ್ಯಸ್ಥರಾದ ಸುಚಿತ್ರಾ ಎಸ್.ಆರ್., ರೋಶ್ನಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ ಕುಮಾರ್, ಕ್ರೀಡಾ ಕಾರ್ಯದರ್ಶಿಗಳಾದ ಪ್ರದೀಪ್, ಅವಿನಾಶ್ ಮೊದಲಾದವರು ಉಪಸ್ಥಿತರಿದ್ದರು.
ಪ್ರಥಮ ಬಾರಿಗೆ ಆಯೋಜಿಸಲಾಗಿದ್ದ ಕೆಸರುಗದ್ದೆ ಕ್ರೀಡಾ ಕೂಟದ ಪ್ರಯುಕ್ತ ಕೆರುಗದ್ದೆ ಓಟ, ಮೂರು ಕಾಲು ಓಟ, ಹಗ್ಗ ಜಗ್ಗಾಟ, ನಿಧಿ ಶೋಧನೆ ಸಹಿತವಾಗಿ ವಿವಿಧ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಯಿತು.
ವಿದ್ಯಾರ್ಥಿನಿಯರಾದ ಶ್ವೇತಾ ಸ್ವಾಗತಿಸಿದರು. ಪ್ರೀತಿ ವಂದಿಸಿದರು. ಶೆರ್ಲಿ ಕಾರ್ಯಕ್ರಮ ನಿರೂಪಿಸಿದರು.