Advertisement

ಪೇಜಾವರ ಮಠದಲ್ಲಿ  ಎಡನೀರು ಶ್ರೀಗಳಿಂದ ದಾಸವಾಣಿ 

12:39 PM Aug 22, 2017 | |

ಮುಂಬಯಿ: ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಪರಮಪೂಜ್ಯ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರ ಮತ್ತು ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳ ಆಶೀರ್ವಾದಗಳೊಂದಿಗೆ ಆ. 19ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ಪೇಜಾವರ ಮಠ ಮುಂಬಯಿ ಶಾಖೆಯಲ್ಲಿ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರಿಂದ ದಾಸವಾಣಿ ಕಾರ್ಯಕ್ರಮ ನಡೆಯಿತು.

Advertisement

ಮುಂಬಯಿ ಚಾತುರ್ಮಾಸ್ಯದಲ್ಲಿರುವ ಸಂಗೀತ ವಿದ್ವಾಂಸರು, ಸಾಹಿತಿಗಳು ಹಾಗೂ ಯಕ್ಷಗಾನ ತಾಳಮದ್ದಳೆಯ ಒಳ್ಳೆಯ ಅರ್ಧದಾರಿಗಳಾಗಿರುವ  ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರು ಪ್ರಾರಂಭದಲ್ಲಿ ಶ್ರೀ ಕೃಷ್ಣ ದೇವರಿಗೆ ಮಂಗಳಾರತಿಯನ್ನು ಬೆಳಗಿಸಿ ಭಕ್ತರಿಗೆ ಮಂತ್ರಾಕ್ಷತೆಯನ್ನು ನೀಡಿ ಆಶೀರ್ವದಿಸಿದರು.

ಪೇಜಾವರ ಮಠ ಮುಂಬಯಿ ಶಾಖೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಕ್ತಾದಿಗಳು, ಸಂಗಿತಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.  ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರುಗಳಾದ ರಾಮದಾಸ ಉಪಾಧ್ಯಾಯ ರೆಂಜಾಳ,  ಪ್ರಕಾಶ ಆಚಾರ್ಯ ರಾಮಕುಂಜ, ನಿರಂಜನ್‌ ಗೋಗೆr ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next