Advertisement

High Court: ಕೇತಗಾನಹಳ್ಳಿ ಭೂ-ಕಬಳಿಕೆ ಪ್ರಕರಣ: ಹೊಸ ತನಿಖೆಗೆ ಹೈಕೋರ್ಟ್‌ ನಕಾರ

12:32 AM Oct 25, 2024 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾದ ಭೂಮಿಗೆ ಸಂಬಂಧಿಸಿದಂತೆ ಈವರೆಗೆ ಸಲ್ಲಿಕೆಯಾಗಿರುವ 11 ಅಫಿಡವಿಟ್‌ಗಳನ್ನು ಆಧರಿಸಿ ಸಮಗ್ರ ವರದಿ ಸಲ್ಲಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಆದೇಶ ಮಾಡಿರುವುದನ್ನು ಜಾರಿ ಮಾಡುವಂತೆ ಹೈಕೋರ್ಟ್‌ ಆದೇಶಿಸಿತ್ತು. ಇದನ್ನು ಜಾರಿ ಮಾಡಲು ವಿಫ‌ಲವಾಗಿರುವ ರಾಜ್ಯ ಸರಕಾರದ ನಡೆ ಪ್ರಶ್ನಿಸಿ ಎಸ್‌.ಆರ್‌. ಹಿರೇಮಠ ನೇತೃತ್ವದ ಸಮಾಜ ಪರಿವರ್ತನ ಸಮುದಾಯ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ. ಸೋಮಶೇಖರ್‌ ಮತ್ತು ನ್ಯಾ| ಕೆ. ರಾಜೇಶ್‌ ರೈ ನೇತೃತ್ವದ ವಿಭಾಗೀಯ ನ್ಯಾಯಪೀಠವು ನಡೆಸಿತು.

Advertisement

Udayavani is now on Telegram. Click here to join our channel and stay updated with the latest news.

Next