Advertisement
ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2018-19ರಿಂದಲೇ ಅಲ್ಲಿಂದ ಮಣ್ಣು ತೆಗೆದಿರುವ ಬಗ್ಗೆ ವರದಿ ಇದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳವರು ಏನು ಮಾಡಿದ್ದಾರೆ ಎಂಬ ಬಗ್ಗೆ ತನಿಖಾ ತಂಡವು ವರದಿ ನೀಡಲಿದೆ. ಇದೇ ವೇಳೆ ಅಲ್ಲಿರುವ 9 ಮನೆಯವರನ್ನು ಸ್ಥಳಾಂತರ ಮಾಡಬೇಕಾಗಿದೆ ಎಂದರು.
Related Articles
“ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಆದರೆ ಈ ಯೋಜನೆಗಳನ್ನು ಇನ್ನಷ್ಟು ಜನರಿಗೆ ಮುಟ್ಟಿಸುವ ಪ್ರಯತ್ನದೊಂದಿಗೆ ಸೋರಿಕೆ ಆಗದೆ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. “ಶಕ್ತಿ’ ಮಹಿಳೆಯರಿಗಾಗಿಯೇ ಮಾಡಲಾದ ಯೋಜನೆಯಾಗಿದ್ದು, ಅದಕ್ಕೆ ಮಾನದಂಡವಿಲ್ಲ. ಗೃಹಲಕ್ಷ್ಮೀಯು ಬಡ ಕುಟುಂಬದ ಮಹಿಳೆಯರಿಗಷ್ಟೆ ಸಿಗಬೇಕಾಗಿದೆ. ಅದಕ್ಕಾಗಿ ಸಮೀಕ್ಷೆ ನಡೆಸಿ, ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Advertisement