Advertisement

ಕೇತುಪುರ ಪಿಎಸಿಸಿಎಸ್‌ ಮಾಜಿ ಕಾರ್ಯದರ್ಶಿ ಬಂಧನ

12:16 PM Mar 05, 2017 | Team Udayavani |

ಬನ್ನೂರು: ಪಟ್ಟಣದ ಸಮೀಪದ ಕೇತುಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ನಾಗರಾಜುರವರನ್ನು 2010-11 ಹಾಗೂ 2011-12ನೇ ಸಾಲಿನಲ್ಲಿ ಸಂಘದ ಹಣ, ರೈತರ ಹಣ ಹಾಗೂ ದಾಸ್ತಾನು ಕೊರತೆ ಉಂಟು ಮಾಡಿರುವ ಆರೋಪದ ಮೇಲೆ ಬನ್ನೂರು ಪೊಲೀಸರು ಬಂಧಿಸಿದ್ದಾರೆ.

Advertisement

ಪಟ್ಟಣದ ಸಮೀಪದ ಕೇತುಪುರ ಗ್ರಾಮದ ಕೃಷಿಪತ್ತಿನ ಸಹಕಾರ ಸಂಘದಲ್ಲಿ ನಾಗರಾಜು ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಸಂಘಕ್ಕೆ ಮೋಸ, ವಂಚನೆ, ನಂಬಿಕೆ ದ್ರೋಹ, ಸಂಘದಲ್ಲಿ ಪೋರ್ಜರಿ ವ್ಯವಹಾರ ನಡೆಸಿರುವುದು ಕಂಡುಬಂದಿತ್ತು.

ಜೊತೆಗೆ ರೈತರ ಹೆಸರಿನಲ್ಲಿ ಸಾಲ ಪಡೆದು ವಂಚನೆ ಮಾಡಿರುವ ಹಿನ್ನೆಲೆ ಯಲ್ಲಿ ನಾಗರಾಜುರನ್ನು ಸಂಘದಿಂದ ಅಮಾನತ್ತು ಮಾಡಿ, ವಿಚಾರಣೆ ನಡೆಸಲಾಗಿತ್ತು. ಲೆಕ್ಕಪರಿಶೋಧನೆಯಲ್ಲಿ 33,99,727.51 ರೂ. ದುರುಪ ಯೋಗವಾಗಿರುವುದು ತಿಳಿದುಬಂದಿತ್ತು.

ಈ ಹಿನ್ನೆಲೆಯಲ್ಲಿ ನಾಗರಾಜು ರನ್ನು ಸೇವೆಯಿಂದ ವಜಾಗೊಳಿಸಿ ಆಡಳಿತ ಮಂಡಳಿಯವರು ಬನ್ನೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ದಂತೆ ಬನ್ನೂರು ಪೊಲೀಸರು ನಾಗರಾಜುರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ತಿಳಿಸಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next