Advertisement

ಜಹಾಂಗೀರ್ ಪುರಿ ಹಿಂಸಾಚಾರ: ಪ್ರಮುಖ ಆರೋಪಿ ಪಶ್ಚಿಮ ಬಂಗಾಳದಲ್ಲಿ ಸೆರೆ

07:08 PM Apr 28, 2022 | Team Udayavani |

ಕೋಲ್ಕತಾ : ಜಹಾಂಗೀರ್‌ಪುರಿ ಕೋಮುಗಲಭೆಯ ಮೋಸ್ಟ್ ವಾಂಟೆಡ್ ಆರೋಪಿಗಳಲ್ಲಿ ಒಬ್ಬನನ್ನು ಪಶ್ಚಿಮ ಬಂಗಾಳದಲ್ಲಿ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಗುರುವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

Advertisement

ಆರೋಪಿಯನ್ನು ಫರೀದ್ ಅಲಿಯಾಸ್ ನೀತು ಎಂದು ಗುರುತಿಸಲಾಗಿದ್ದು, ಈತ ಕೋಮುಗಲಭೆಗಳಲ್ಲಿ ಅತ್ಯಂತ ಸಕ್ರಿಯವಾಗಿ ಪಾಲ್ಗೊಂಡಿದ್ದ ಮತ್ತು ಪ್ರಮುಖ ಪಾತ್ರ ವಹಿಸಿದ್ದ. ಪಶ್ಚಿಮ ಬಂಗಾಳದಲ್ಲಿ ನಿಯೋಜಿಸಲಾದ ನಮ್ಮ ಹಲವಾರು ತಂಡಗಳು ಗುರುವಾರ ತಮ್ಲುಕ್ ಗ್ರಾಮದ ಆತನ ಚಿಕ್ಕಮ್ಮನ ಮನೆಯಿಂದ ಬಂಧಿಸಿವೆ. ಅವನನ್ನು ಇಂದು ವಿಮಾನದ ಮೂಲಕ ನವದೆಹಲಿಗೆ ಕರೆತರಲಾಗುತ್ತಿದೆ ಎಂದು ಕ್ರೈಂ ಬ್ರಾಂಚ್ ಮೂಲವೊಂದು ತಿಳಿಸಿದೆ.

ಗಲಾಟೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಅಂದಿನಿಂದ, ಅವರು ತಮ್ಮ ಸ್ಥಳಗಳನ್ನು ಬದಲಾಯಿಸುತ್ತಿದ್ದರು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುತ್ತುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಬಂಧಿತನ ವಿರುದ್ಧ 2010 ರಿಂದ ದರೋಡೆ, ಕಳ್ಳತನ ಮತ್ತು ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ಆರು ಪ್ರಕರಣಗಳು ದಾಖಲಾಗಿವೆ ಮತ್ತು ಜಹಾಂಗೀರ್‌ಪುರಿ ಪ್ರದೇಶದಲ್ಲಿ ರೌಡಿ ಶೀಟರ್ ಆಗಿದ್ದಾನೆ. ಏಪ್ರಿಲ್ 16 ರಂದು ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಹನುಮಾನ್ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ್ದು, ಎಂಟು ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿ ಗಾಯಗೊಂಡಿದ್ದರು.ಘರ್ಷಣೆಯ ಸಮಯದಲ್ಲಿ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಲಾಗಿದೆ ಮತ್ತು ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.

ಹಿಂಸಾಚಾರದ ಕೆಲವು ದಿನಗಳ ನಂತರ, ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಅವರು ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪಗಳನ್ನು ತನಿಖೆ ಮಾಡಲು ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾರೆ.

Advertisement

ಪ್ರಕರಣದ ಐವರು ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next