Advertisement

BJP ನೂತನ ಅಧ್ಯಕ್ಷ ನಳಿನ್ ಪದಗ್ರಹಣ ಕಾರ್ಯಕ್ರಮಕ್ಕೆ ಪ್ರಮುಖ ಸಚಿವರೇ ಗೈರು; ಅಸಮಾಧಾನ ಸ್ಫೋಟ?

09:44 AM Aug 28, 2019 | Nagendra Trasi |

ಬೆಂಗಳೂರು:ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಪದಗ್ರಹಣ ಸಮಾರಂಭಕ್ಕೆ ಬಿಜೆಪಿಯ ಪ್ರಮುಖ ಸಚಿವರು ಗೈರುಹಾಜರಾಗುವ ಮೂಲಕ ಪಕ್ಷದೊಳಗಿನ ಅಸಮಾಧಾನ ಬಹಿರಂಗಗೊಂಡಂತಾಗಿದೆ.

Advertisement

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಗಳವಾರ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಅಧಿಕೃತವಾಗಿ ಅಧಿಕಾರವನ್ನು ಹಸ್ತಾಂತರಿಸಿದರು.

ಆದರೆ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಸಚಿವರಾದ ಆರ್.ಅಶೋಕ್, ಶ್ರೀರಾಮುಲು ಗೈರುಹಾಜರಾಗಿದ್ದಾರೆ. ಸಚಿವ ಜಗದೀಶ್ ಶೆಟ್ಟರ್ ಆತುರವಾಗಿ ವೇದಿಕೆಗೆ ಆಗಮಿಸಿ ಶುಭಕೋರಿ ತುರ್ತು ಕೆಲಸವಿದೆ ಎಂದು ಹೇಳಿ ನಿರ್ಗಮಿಸಿದ್ದರು.

ಯಡಿಯೂರಪ್ಪ ನೇತೃತ್ವದ ನೂತನ ಸಚಿವ ಸಂಪುಟದ ಸಚಿವರಿಗೆ ಸೋಮವಾರ ಖಾತೆಯನ್ನು ಹಂಚಲಾಗಿತ್ತು. ಅಲ್ಲದೇ ಮೂವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿತ್ತು. ಗೋವಿಂದ ಕಾರಜೋಳ, ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿಗೆ ಡಿಸಿಎಂ ಪಟ್ಟ ನೀಡಲಾಗಿದೆ. ಇದರಿಂದ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಶ್ರೀರಾಮುಲು ಅಸಮಾಧಾನಗೊಂಡಿದ್ದಾರೆನ್ನಲಾಗಿದೆ. ಅದೇ ರೀತಿ ಗೃಹ ಖಾತೆ ಮೇಲೆ ಕಣ್ಣಿಟ್ಟಿದ್ದ ಆರ್.ಅಶೋಕ್ ಗೆ ಕಂದಾಯ ಖಾತೆ ನೀಡಿರುವುದು ಅಸಮಾಧಾನಕ್ಕೆ ಕಾರಣ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next