Advertisement
-2020ರ ನ. 3ರಿಂದ 5ರ ವರೆಗೆ ಬೆಂಗಳೂರಿನಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಹುಮ್ನಾಬಾದ ತಾಲೂಕಿನಲ್ಲಿ ತಾಂಡಾ ಅಭಿವೃದ್ದಿ ನಿಗಮದಿಂದ ಪಾರ್ಕ್ ಅಭಿವೃದ್ಧಿ ಪಡಿಸಲು 5 ಎಕರೆ ಜಮೀನು.
Related Articles
Advertisement
-ಕೌಶಲ್ಯಾಭಿವೃದ್ದಿ ಇಲಾಖೆಯಲ್ಲಿ ಬೆಳಗಾವಿ, ಹುಬ್ಬಳ್ಳಿ, ಮಂಗಳೂರು, ಶಿವಮೊಗ್ಗ, ಹಾಸನ, ತುಮಕೂರು ಮತ್ತು ಹರಿಹರಗಳಲ್ಲಿ ಖಾಸಗಿ ಸಂಸ್ಥೆಗಳ ನೆರವಿನಿಂದ ಜಿಟಿಟಿಸಿ ತರಬೇತಿ ಕೇಂದ್ರಗಳನ್ನು ತೆರೆಯಲು ನಿರ್ಧಾರ, ಶೇ.90 ಖಾಸಗಿ ಸಂಸ್ಥೆಗಳು ಬಂಡವಾಳ ಹಾಕಲಿವೆ. 353 ಕೋಟಿ ರೂ. ಯೋಜನೆಗೆ ರಾಜ್ಯ ಸರ್ಕಾರ 36 ಕೋಟಿ ರೂ.ನೀಡಲಿದೆ.
-ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯಲ್ಲಿ ನೇಮಕಾತಿಯಲ್ಲಿ ನಿಯಮಗಳ ತಿದ್ದುಪಡಿಗೆ ಒಪ್ಪಿಗೆ ದಾವಣಗೆರೆ ಜಿಲ್ಲೆಯ ನ್ಯಾಮತಿ ಗ್ರಾ.ಪಂ., ಜೇವರ್ಗಿ ತಾಲೂಕಿನ ಯಡ್ರಾವಿ ಗ್ರಾ.ಪಂ. ಪಟ್ಟಣ ಪಂಚಾಯತಿಯನ್ನಾಗಿ ಮೆಲ್ದರ್ಜೆಗೆ
-ಬಾದಾಮಿಗೆ ಕೆಲವು ಗ್ರಾಮ ಸೇರಿಸಿ ಪುರಸಭೆ ವ್ಯಾಪ್ತಿಗೆ ಸೇರಿಸಲು ನಿರ್ಧಾರ.
-ಯುವಜನ ಮತ್ತು ಕ್ರೀಡಾ ಇಲಾಖೆಯಿಂದ ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್, ಮಡಿಕೇರಿಯಲ್ಲಿ 12.5 ಕೋಟಿ ವೆಚ್ಚದಲ್ಲಿ ಕ್ರೀಡಾ ಸಮುಚ್ಚಯಕ್ಕೆ ಒಪ್ಪಿಗೆ.
-ವಿಕ್ಟೋರಿಯಾ ಆಸ್ಪತ್ರೆ, ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆ, ಹುಬ್ಬಳ್ಳಿ ಕಿಮ್ಸ್ ಹಾಗೂ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರಗಳು ಮೇಲ್ದರ್ಜೆಗೆ.
-ಸರ್.ಎಂ. ವಿಶ್ವೇಶ್ವರಯ್ಯ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಆವರಣ ಮುದ್ದೇನಹಳ್ಳಿಯಲ್ಲಿ ಕಟ್ಟಡ ನಿರ್ಮಾಣ ಮಾಡಲು 16 ಕೋಟಿ.
-ಸಮಾಜ ಕಲ್ಯಾಣ ಇಲಾಖೆ ವತಿಯಿಂದ 20 ಸಂಚಾರಿ ಆರೋಗ್ಯ ಕೇಂದ್ರಗಳ ಸ್ಥಾಪಿಸಿ ಗುಡ್ಡಗಾಡು ಪ್ರದೇಶದಲ್ಲಿ ಬಳಕೆ.
-ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಷೆೇರು ಬಂಡವಾಳ 150 ಕೋಟಿಯಿಂದ 650 ಕೋಟಿ ರೂ.ಗೆ ಹೆಚ್ಚಳ.