Advertisement

ಪ್ರಯಾಗ್‌ರಾಜ್‌ನಲ್ಲಿ ಆರೆಸ್ಸೆಸ್‌ ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ

09:00 PM Oct 15, 2022 | Team Udayavani |

ಲಕ್ನೋ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್‌) ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯಲಿದೆ.

Advertisement

ಭಾನುವಾರದಿಂದ ನಾಲ್ಕು ದಿನಗಳ ಕಾಲ ಸಭೆ ನಡೆಯಲಿದ್ದು, ಸಂಘದ ಮುಖ್ಯಸ್ಥರಾದ ಮೋಹನ್‌ ಭಾಗವತ್‌, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸೇರಿ ಅನೇಕ ಪ್ರಮುಖರು ಭಾಗವಹಿಸಲಿದ್ದಾರೆ.

ಭಾಗವತ್‌ ಅವರು ವಿಜಯದಶಮಿಯ ಕಾರ್ಯಕ್ರಮದ ಭಾಷಣದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ, ಜನಸಂಖ್ಯೆ ಅಸಮತೋಲನ, ಸಾಮಾಜಿಕ ಸಾಮರಸ್ಯ ಸೇರಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದರು. ಈ ಎಲ್ಲ ವಿಚಾರಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಆರ್‌ಎಸ್‌ಎಸ್‌ನ ಪ್ರಚಾರ ಉಸ್ತುವಾರಿ ಸುನಿಲ್‌ ಅಂಬೇಕರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next