Advertisement

ದೇವಂಗಿ ಭಾಗದಲ್ಲಿ KFD ಪತ್ತೆ

11:23 PM Apr 07, 2023 | Pranav MS |

ತೀರ್ಥಹಳ್ಳಿ: ಮಲೆನಾಡು ಭಾಗದಲ್ಲಿ ಬಿಸಿಲಿನ ತಾಪ ಏರುತ್ತಿದ್ದು, ಮಂಗನ ಕಾಯಿಲೆಯ ಉಪಟಳವೂ ಹೆಚ್ಚಾಗುತ್ತಿದೆ. ತಾಲೂಕಿನ ದೇವಂಗಿ, ಆಲ್ಮನೆ, ಕನ್ನಂಗಿ ಮುಂತಾದ ಭಾಗಗಳಲ್ಲಿ ಈಗಾಗಲೇ ಪ್ರಕರಣಗಳು ಕಾಣಿಸಿಕೊಂಡಿವೆ. ಈ ಭಾಗಗಳ ಜನರಿಗೆ ಜ್ವರ ಕಾಣಿಸಿಕೊಳ್ಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ, ತಾಲೂಕು ಆಡಳಿತ ತತ್‌ಕ್ಷಣ ಗಮನ ಹರಿಸಿ ಸಾರ್ವಜನಿಕರ ಆರೋಗ್ಯ ಕಾಪಾಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಈಗಾಗಲೇ ಮೂರು ಕೆಎಫ್‌ಡಿ (ಮಂಗನ ಕಾಯಿಲೆ) ಪ್ರಕರಣಗಳು ದಾಖಲಾಗಿದ್ದು, ತಾಲೂಕಿನ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next