ಶಿವಮೊಗ್ಗ: ಮಲೆನಾಡಿನಲ್ಲಿ ಕೊರೊನಾ ಆತಂಕದ ನಡುವೆಯೇ ಮಂಗನಕಾಯಿಲೆ ಪತ್ತೆಯಾಗಿದೆ.
ತೀರ್ಥಹಳ್ಳಿ ತಾಲೂಕಿನ ಮಾಳೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೂಡಿಗೆ ಗ್ರಾಮದ ಮಹಿಳೆಯಲ್ಲಿ ಮಂಗನಕಾಯಿಲೆಯ ಲಕ್ಷಣ ಕಾಣಿಸಿಕೊಂಡಿದೆ. ಸದ್ಯ ಅವರು ತೀರ್ಥಹಳ್ಳಿ ತಾಲೂಕಿನ ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸುಧಾರಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮಂಗನಕಾಯಿಲೆ ಪತ್ತೆಯಾದ ಗ್ರಾಮದ ಸುತ್ತಲಿನ ಪ್ರದೇಶಗಳಲ್ಲಿ ಮಂಗಗಳು ಮೃತಪಟ್ಟಿರುವ ಬಗ್ಗೆ ವರದಿಯಾಗಿಲ್ಲ.
ಇದನ್ನೂ ಓದಿ:ವಾರಾಂತ್ಯದ ಕರ್ಫ್ಯೂ ತೆರವು ಹಿನ್ನೆಲೆ: ಮತ್ತೆ ಯಥಾಸ್ಥಿತಿಗೆ “ನಮ್ಮ ಮೆಟ್ರೋ’- ಬಸ್ ಸೇವೆ
ಮೊನ್ನೆಯಷ್ಟೇ ಮಂಗಗಳ ಉಣುಗು ಪರೀಕ್ಷೆಯಲ್ಲಿ ರೋಗದ ಲಕ್ಷಣಗಳು ಕಂಡಿದ್ದವು. ಮಲೆನಾಡಿನಲ್ಲಿ ಮಂಗಗಳ ಸಂಖ್ಯೆ ಹೆಚ್ಚಿದ್ದು ಮತ್ತಷ್ಟು ಭಯ ಹುಟ್ಟಿಸಿದೆ.