ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತ ಮಹಿಳೆಯನ್ನು ಕಾರ್ಮಿಕ ಮಹಿಳೆ ಕೊಟ್ರಮ್ಮ (43) ಎಂದು ಗುರುತಿಸಲಾಗಿದೆ.
ಕೊಪ್ಪ ತಾಲ್ಲೂಕಿನ ನುಗ್ಗಿ ಗ್ರಾ.ಪಂ ವ್ಯಾಪ್ತಿಯ ದೇವಗನ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯಾಗಿದ್ದು, ಕೆಲ ದಿನಗಳ ಹಿಂದೆ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಕುರುತು ಕಳೆದ ಸೋಮವಾರ ಮಹಿಳೆಯ ರಕ್ತದ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದರು ಎನ್ನಲಾಗಿದ್ದು ವರದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿತ್ತು.
ಅರೋಗ್ಯ ಸಮಸ್ಯೆ ಉಲ್ಬಣಗೊಂಡ ಕಾರಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊಟ್ರಮ್ಮ ಮೃತಪಟ್ಟಿದ್ದಾರೆ.
ಮಾಹಿತಿಯ ಪ್ರಕಾರ ಕೊಟ್ರಮ್ಮ ಅವರಿಗೆ ಕಾಡಿನಲ್ಲಿ ಸೌದೆ ತರಲು ಹೋಗಿರುವ ವೇಳೆ ಸೋಂಕು ತಗಲಿರಬಹುದು ಎಂದು ಹೇಳಾಗಿದೆ. ಕೊಪ್ಪ ಹಾಗೂ ಎನ್.ಆರ್ ಪುರದಲ್ಲಿ ಮತ್ತೆ 6 ಮಂದಿಯಲ್ಲಿ ಸೋಂಕು ಇರುವುದಾಗಿ ಹೇಳಲಾಗಿದೆ.
ಇದನ್ನೂ ಓದಿ: Reliance ಡಿಸ್ನೀ ವಿಲೀನದ ನಂತರ ಮಾಧ್ಯಮ ಸಂಸ್ಥೆಗೆ ನೀತಾ ಅಂಬಾನಿಗೆ ಅಧ್ಯಕ್ಷ ಹುದ್ದೆ: ವರದಿ