Advertisement

Chikkamagaluru; ಮಲೆನಾಡು ಭಾಗದಲ್ಲಿ ಹೆಚ್ಚುತ್ತಿದೆ ಮಂಗನ ಕಾಯಿಲೆ ಭೀತಿ

01:23 PM Feb 08, 2024 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (ಕೆಎಫ್ ಡಿ) ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ.

Advertisement

ಜಿಲ್ಲೆಯಲ್ಲಿ ಇದುವರೆಗೂ 7 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಶೃಂಗೇರಿ ತಾಲೂಕಿನ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾರೆ.

ಮಂಗನ ಕಾಯಿಲೆಗೆ ಬಾಧಿತರಾದ 7 ಜನರಲ್ಲಿ ಮೂರು ಜನ ಗುಣಮುಖರಾಗಿದ್ದು ಮೂರು ಜನ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಹರಡದಂತೆ ಆರೋಗ್ಯ ಇಲಾಖೆಯಿಂದ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ. ಕಾಯಿಲೆ ಕಾಣಿಸಿಕೊಂಡ ಪ್ರದೇಶದಲ್ಲಿನ ಉಣ್ಣೆಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಕಾಡಿಗೆ ತೆರಳುವಾಗ ಉಣ್ಣೆಗಳ ಮೈಮೇಲೆ ಹತ್ತದಂತೆ ಔಷಧ ನೀಡಲಾಗುತ್ತಿದೆ. ಹಾಗೂ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ ಬಾಬು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next