Advertisement

ಅಭಿಮಾನಿಗಳಿಗೆ ಬಿಗ್ ಅಪ್ಡೇಟ್ ಕೊಟ್ಟ ಯಶ್ |ಕೆಜಿಎಫ್-2 ಬಿಡುಗಡೆ ದಿನಾಂಕ ಘೋಷಣೆ

03:17 PM Aug 22, 2021 | Team Udayavani |

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 2022 ರ ಏಪ್ರಿಲ್ 14 ರಂದು ಈ ಚಿತ್ರ ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ.

Advertisement

ಇಂದು ( ಆ.22) ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಬಿಗ್ ಅಪ್ಡೇಟ್ ನೀಡಿರುವ ರಾಕಿ ಭಾಯ್, ಪ್ರಸ್ತುತ ದಿನಗಳಲ್ಲಿ ಕೆಲವೊಂದು ಅನಿಶ್ಚಿತತೆಯಿಂದ ವಿಳಂಭವಾಯಿತು. ಆಯಿತು ಖಂಡಿತವಾಗಿಯೂ 2022 ಏಪ್ರಿಲ್ 14 ರಂದು ಕೆಜಿಎಫ್ ಚಾಪ್ಟರ್ 2 ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಇನ್ನು ಇತ್ತೀಚಿಗಷ್ಟೆ ಬಹುನಿರೀಕ್ಷಿತ ಕೆಜಿಎಫ್  ಚಾಪ್ಟರ್ 2 ಸಿನಿಮಾದ ಸ್ಯಾಟಲೈಟ್ ಹಕ್ಕುಗಳನ್ನು ಜೀ ಸಂಸ್ಥೆ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ನೂರು ಕೋಟಿ ರೂ. ನೀಡಿದೆ ಎಂದು ವರದಿಗಳು ತಿಳಿಸಿವೆ. 100 ಕೋಟಿ ರೂ.ಗೆ ಸ್ಯಾಟಲೈಟ್ ಹಕ್ಕುಗಳು ಮಾರಾಟ ವಾಗಿದೆ ಎಂದು ತಿಳಿದು ಬಂದಿದೆ.

ಒಟಿಟಿ ಯಿಂದಲೂ ಈ ಚಿತ್ರಕ್ಕೆ ದೊಡ್ಡ ಮೊತ್ತದ ಆಫರ್ ಬಂದಿತ್ತು. 250 ಕೋಟಿ ರೂ. ನೀಡುವುದಾಗಿ ಹೇಳಿಕೊಂಡಿತ್ತು. ಆದರೆ, ಚಿತ್ರತಂಡ ಇದನ್ನು ತಿರಸ್ಕರಿಸಿತು.

Advertisement

ಪ್ರಶಾಂತ್ ನೀಲ್ ನಿರ್ದೇಶನ ಕೆಜಿಎಫ್ 2 ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸಿದ್ದಾರೆ. ಬಾಲಿವುಡ್ ನಟ ಸಂಜಯ್ ದತ್, ರವೀನಾ ಟಂಡನ್ ಸೇರಿದಂತೆ ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ವಿಜಯ್ ಕಿರಂಗದೂರು ಅವರು ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next