Advertisement

ಲಹರಿ ಸಂಸ್ಥೆ ತೆಕ್ಕೆಗೆ ‘ಕೆಜಿಎಫ್ ಚಾಪ್ಟರ್ -2’ ಆಡಿಯೋ ರೈಟ್ಸ್

04:16 PM Jul 01, 2021 | Team Udayavani |

ಬೆಂಗಳೂರು:  ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಆಡಿಯೋ ರೈಟ್ಸ್ ಇದೀಗ ಬಿಗ್ ಮೊತ್ತಕ್ಕೆ ಸೇಲಾಗಿದೆ.

Advertisement

ಕೆಜಿಎಫ್ ಆಡಿಯೋ ರೈಟ್ಸ್ ಹೆಸರಾಂತ ಸಂಸ್ಥೆ ‘ಲಹರಿ ಆಡಿಯೋಸ್ ಕಂಪನಿ’ಯ ಪಾಲಾಗಿದೆ. ಇಂದು ( ಜುಲೈ 01) ಲಹರಿ ಆಡಿಯೋ ಸಂಸ್ಥೆ ಮಾಲೀಕರಾದ ಮನೋಹರ್ ನಾಯ್ಡು ಹಾಗೂ ಲಹರಿ ವೇಲು ಅವರನ್ನು ಭೇಟಿಯಾದ ನಿರ್ಮಾಪಕ ವಿಜಯ್ ಕಿರಗಂದೂರ್ ಕೆಜಿಎಫ್ 2  ಚಿತ್ರದ ಆಡಿಯೋ ರೈಟ್ಸ್ ಮಾರಾಟದ ಪ್ರತಿಯನ್ನು ಹಸ್ತಾಂತರಿಸಿದ್ದಾರೆ. ಎಷ್ಟು ಮೊತ್ತಕ್ಕೆ ಮಾರಾಟವಾಗಿದೆ ಎಂಬುದು ಮಾತ್ರ ರಿವೀಲ್ ಆಗಿಲ್ಲ.

ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳಿರುವ ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿ ನಟಿಸಿರುವ ಕೆಜಿಎಫ್ ಚಾಪ್ಟರ 2 ಸಿನಿಮಾ ಇದೆ ವರ್ಷ ಬಿಡುಗಡೆಯಾಗಲಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ಅವರು ಬಹುಕೋಟಿಯಲ್ಲಿ ಈ ಸಿನಿಮಾ ನಿರ್ಮಿಸಿದ್ದಾರೆ.

ಕನ್ನಡ, ತೆಲುಗು, ಹಿಂದಿ ಸೇರಿದಂತೆ ಬಹುಭಾಷೆಯಲ್ಲಿ ಬಿಡುಗಡೆಯಾಗಲಿರುವ ಈ ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್ ನಟಿಸಿರುವುದು ನಿರೀಕ್ಷೆ ದುಪ್ಪಟ್ಟಗೊಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next