ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸಿನಿಮಾ ವಿಶ್ವಾದ್ಯಂತ ಎರಡನೇ ವಾರವೂ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಈವರೆಗೆ ಗಲ್ಲಾಪೆಟ್ಟಿಗೆಯಲ್ಲಿ 880 ಕೋಟಿ ರೂಪಾಯಿ ಹಣ ಗಳಿಕೆ ಮಾಡಿದೆ.ಕೆಜಿಎಫ್ ಚಾಪ್ಟರ್ 2 ಜಾಗತಿಕವಾಗಿ ಅತೀ ಹೆಚ್ಚು ಹಣಗಳಿಕೆ ಮಾಡಿದ ಐದನೇ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇದನ್ನೂ ಓದಿ:ಗುಂಡ್ಲುಪೇಟೆ : ಮಳೆಯಿಂದ ಭರ್ತಿಯಾದ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು
ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 2 ಸಿನಿಮಾ ಭಾರತದ ಎಲ್ಲಾ ಮಹಾನಗರಗಳಲ್ಲಿ ಅತ್ಯುತ್ತಮ ಪ್ರದರ್ಶನ ಕಾಣುತ್ತಿದೆ. ಏಪ್ರಿಲ್ 14ರಂದು ತೆರೆಕಂಡಿದ್ದ ಕೆಜಿಎಫ್ ಚಾಪ್ಟರ್ 2 ಚಿತ್ರ ಭರ್ಜರಿ ದಾಖಲೆ ಬರೆದಿದೆ.
ಏಪ್ರಿಲ್ 24ರ ವಾರಾಂತ್ಯಕ್ಕೆ ಜಾಗತಿಕ ಮಟ್ಟದ ಬಾಕ್ಸಾಫೀಸ್ ನಲ್ಲಿ 880 ಕೋಟಿ ರೂಪಾಯಿ ಹಣ ಗಳಿಸಿದೆ. ಕೆಜಿಎಫ್ 2 ರಾಜ್ಯದ ಎಲ್ಲಾ ಥಿಯೇಟರ್ ಗಳಲ್ಲೂ ಹೆಚ್ಚಿನ ಪ್ರಮಾಣದ ಪ್ರೇಕ್ಷಕರನ್ನು ಮೋಡಿ ಮಾಡಿರುವುದಾಗಿ ವರದಿ ತಿಳಿಸಿದೆ.
ಬಾಕ್ಸಾಫೀಸ್ ವಿಶ್ಲೇಷಕ ಹಾಗೂ ಸಿನಿಮಾ ನಿರ್ದೇಶಕ ರಮೇಶ್ ಬಾಲಾ ಅವರು ಈ ಕುರಿತು ಟ್ವೀಟ್ ಮಾಡಿದ್ದು, ಕೆಜಿಎಫ್ ಚಾಪ್ಟರ್ 2 ಸಿನಿಮಾ ವಿಶ್ವಾದ್ಯಂತ 880 ಕೋಟಿ ರೂಪಾಯಿ ಹಣ ಗಳಿಕೆ ಮಾಡಿದೆ ಎಂದು ತಿಳಿಸಿದ್ದಾರೆ.